ಧರ್ಮಸ್ಥಳ: ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಅನುಗ್ರಹ ಬೇಡಿ ಪ್ರಾರ್ಥನೆ ಸಲ್ಲಿಸಿ, ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು.
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದೇನೆ. ಮಂಜುನಾಥನ ಆಶಿರ್ವಾದದಂತೆ ಮುಂದಿನ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವರುಗಳಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ರಮಾನಾಥ ರೈ, ಕೆ.ಗಂಗಾಧರ ಗೌಡ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜನ್ ಜಿ ಗೌಡ, ಶೈಲೇಶ್ ಕುಮಾರ್, ಜಿ.ಪಂ ಸದಸ್ಯರಾದ ಶೇಖರ್ ಕುಕ್ಕೇಡಿ, ಎಪಿಎಂಸಿ ಅಧ್ಯಕ್ಷ ಚಿದಾನಂದ ಪೂಜಾರಿ, ಮುಖಂಡರುಗಳಾದ ಸುದರ್ಶನ್ ಜೈನ್ ಬಂಟ್ವಾಳ, ಮನೋಹರ್ ಕುಮಾರ್ ಎ, ಮೋಹನ್ ಕಲ್ಮಂಜ, ರಾಯ್, ಗಫೂರ್, ಪ್ರವೀಣ್, ಬಿ.ಕೆ ವಸಂತ, ಚಂದು ಎಲ್, ಅನಿಲ್ ಪೈ, ಮೊದಲಾದವರು ಉಪಸ್ಥಿತರಿದ್ದರು.