ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ

ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ ಆತಂಕ ಮೂಡಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ರೈತರು ಹಾಗೂ ಜನಸಾಮಾನ್ಯರ ಹಿತ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಈ ವಿಚಾರದಲ್ಲಿ ಯಾವುದೇ ರೀತಿಯ ಆತಂಕಕ್ಕೆ ಅವಕಾಶ ನೀಡದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ವಿಸ್ತೃತ ಚರ್ಚೆ ನಡೆಸಲಾಗುವುದು. ಸಭೆಯ ಎರಡನೇ ದಿನವನ್ನು ಸಂಪೂರ್ಣವಾಗಿ ರೈತರ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗಿದ್ದು, ಎಲ್ಲಾ ಶಾಸಕರ ಅಭಿಪ್ರಾಯಗಳನ್ನು ದಾಖಲಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಜನರ ಬದುಕಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಇದೇ ವೇಳೆ ಉಮರ್ ಖಾಲಿದ್ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, “ಆ ಹೇಳಿಕೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ” ಎಂದು ತಿಳಿಸಿದರು.

ಸಂಪುಟ ಸಭೆಗೆ ಮಂಗಳೂರು ಸಜ್ಜು

ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸಭೆಯ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿವೆ. ಮುಖ್ಯಮಂತ್ರಿ ಅವರ ವಾಹನ ಸಂಚಾರಕ್ಕಾಗಿ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು.

ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆ ಇದೆ.

ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ಬಳಿಕ ಬೆಳಗ್ಗೆ 10 ಗಂಟೆಯ ನಂತರ ಸಚಿವ ಸಂಪುಟ ಸಭೆ ಆರಂಭವಾಗಲಿದೆ.

ಸಚಿವರ ಪ್ರಯಾಣಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದ್ದು, ಪಂಪುವೆಲ್‌ನಲ್ಲಿ ಅದ್ದೂರಿ ಸ್ವಾಗತಕ್ಕೆ ಸಿದ್ಧತೆ ನಡೆಸಲಾಗಿದೆ. ಇದೇ ವೇಳೆ ತಣ್ಣೀರುಬಾವಿ ಕಡಲತೀರದಲ್ಲಿ ಕರಾವಳಿಯ ಸಾಂಪ್ರದಾಯಿಕ ಶೈಲಿಯ ಡಿನ್ನರ್ ವ್ಯವಸ್ಥೆಯನ್ನೂ ಮಾಡಲಾಗಿದೆ.

ಕರಾವಳಿ ಭಾಗದ ಅಭಿವೃದ್ಧಿ, ರೈತರ ಸಮಸ್ಯೆಗಳು ಹಾಗೂ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದ ವಿಚಾರಗಳು ಸಭೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಬರುವ ಸಾಧ್ಯತೆ ಇದೆ.

Spread the love
  • Related Posts

    ಕಂಬಳದ ಸೊಬಗು, ಮೈಸೂರು ದಸರಾಗೆ ಹೊಸ ಮೆರುಗು ನೀಡಿದ ತುಳುನಾಡಿನ ಜನಪದ ಕ್ರೀಡೆ

    Mysore: ನಾಡಹಬ್ಬ ಮೈಸೂರು ದಸರಾದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿರುವ ಕಂಬಳವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಹಾಗೂ ವೀರ ಗಂಗಾಧರ ಅಜ್ಜಯ್ಯ ಅವರ ಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ…

    Spread the love

    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಗೊಂಡಿದ್ದು ಬೆಳ್ತಂಗಡಿ ತಾಲೂಕಿನ 7 ಮಂದಿಗೆ ಜಿಲ್ಲಾ ರಾಜೋತ್ಸವ ಪ್ರಶಸ್ತಿ 2026 ಒಲಿದು ಬಂದಿದೆ. ಜಾನಪದ ಕ್ಷೇತ್ರದಲ್ಲಿ ಕೊಯ್ಯುರು ಗ್ರಾಮದ ಹಳ್ಳಿಮನೆ ಹೈದಾ‌ರ್ ಆಲಿ ಕೆ. ದೈವ ನರ್ತಕ…

    Spread the love

    You Missed

    ಕಂಬಳದ ಸೊಬಗು, ಮೈಸೂರು ದಸರಾಗೆ ಹೊಸ ಮೆರುಗು ನೀಡಿದ ತುಳುನಾಡಿನ ಜನಪದ ಕ್ರೀಡೆ

    • By admin
    • November 1, 2026
    • 4 views

    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • November 1, 2026
    • 3 views
    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • October 31, 2026
    • 7 views
    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು

    • By admin
    • October 30, 2026
    • 9 views
    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    • By admin
    • October 21, 2026
    • 15 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 14 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು