ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಬೇಟಿ ನೀಡಿ ಆಶೀರ್ವಾದ ಪಡೆದ ಡಿ.ಕೆ.ಶಿ

ತುಮಕೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಇಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದರು.

ಕಾಡಸಿದ್ದೇಶ್ವರ ಮಠದ ಶ್ರೀ ಗಳ ಜೊತೆ ನೂತನ KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕಾಡಸಿದ್ದೇಶ್ವರ ಮಠದ ಡಾ. ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ (ಅಜ್ಜಯ್ಯ) ಯವರ ಆಶೀರ್ವಾದ ಪಡೆದರು.

READ ALSO

ಡಿ.ಕೆ.ಶಿವಕುಮಾರ್ ಮಠದ ಪರಮ ಭಕ್ತರಾಗಿದ್ದು ಆಗಾಗ ಶ್ರೀ ಮಠಕ್ಕೆ ಭೇಟಿ ನೀಡಿ ಅಜ್ಜಯ್ಯನ ಆಶೀರ್ವಾದ ಪಡೆಯುತಿರುತ್ತಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ, ಕಾಂಗ್ರೆಸ್ ವಕ್ತಾರ ಮುರಳಿಧರ್ ಹಾಲಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಂತರಾಜು, ಮಾಜಿ ತಾ.ಪಂ.ಅಧ್ಯಕ್ಷ ಎನ್.ಎಂ. ಸುರೇಶ್, ತಾ.ಪಂ. ಉಪಾಧ್ಯಕ್ಷ ಎನ್.ಶಂಕರ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಜೊತೆಗಿದರು.