ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಟದಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸುಂದರ ರವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ರವರು ಬೇಟಿ ನೀಡಿ ಬಿಜೆಪಿ ನಾಮಫಲಕ ಅಳವಡಿಸಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಬಿಜೆಪಿ ಪ್ರಮುಖರಾದ ಉದಯ ಶೆಟ್ಟಿ, ಬಿಜೆಪಿ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಗ್ರಾಮ ಸಮಿತಿಯ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.