ಬೆಳ್ತಂಗಡಿ: ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಆ. 18ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.