ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ

ಧರ್ಮಸ್ಥಳ: ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರವಾಗಿದ್ದು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂದರ್ಭದಲ್ಲಿ ಆಶೀರ್ವಚನ ನೀಡಿದರು. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದ ಸರ್ವತೋಮುಖ ಪ್ರಗತಿಯೊಂದಿಗೆ ಸಮಾಜಕ್ಕೂ ಅನುಪಮ ಸೇವೆ ನೀಡಿದ್ದಾರೆ.
ಮಹಾತ್ಮ ಗಾಂಧೀಜಿಯವರ ಗ್ರಾಮರಾಜ್ಯದ ಮೂಲಕ ರಾಮರಾಜ್ಯದ ಕನಸನ್ನು ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮನಪರಿವರ್ತನೆ ಮೂಲಕ ಮದ್ಯವರ್ಜನ ಶಿಬಿರದೊಂದಿಗೆ ನನಸಾಗಿ ಮಾಡಿದ್ದಾರೆ.
ಪ್ರಧಾನಿ ಮೋದಿಯವರ ವಿಕಸಿತ ಭಾರತ ಕಲ್ಪನೆಯನ್ನು ಅನುಷ್ಠಾನಗೊಳಿಸಿದ್ದಾರೆ. ಅನೇಕ ದೀನ-ದಲಿತರ, ಮಹಿಳೆಯರ ಬದುಕಿಗೆ ತಾಯಿ-ತಂದೆ ಹಾಗೂ ಪೋಷಕರಂತೆ ಪ್ರೀತಿಮತ್ತು ವಿಶ್ವಾಸದಿಂದ ನಿರಂತರ ಪ್ರೇರಣೆ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿ ನವ ಚೈತನ್ಯದೊಂದಿಗೆ ಸ್ವಾವಲಂಬಿ ಜೀವನ ಮಾಡಲು ದಾರಿದೀಪವಾಗಿದ್ದಾರೆ.
ಮಹಿಳಾ ಸಬಲೀಕರಣ, ಧಾರ್ಮಿಕ ಸಂಸ್ಕಾರ, ಭಜನಾ ತರಬೇತಿ ಮೂಲಕ ಸಮಾಜದ ಸರ್ವರೂ ಸುಖ-ಶಾಂತಿ ಮತ್ತು ನೆಮ್ಮದಿಯಿಂದ ಬದುಕುವಂತೆ ಎಲ್ಲರಿಗೂ ಕಾಯಕಲ್ಪ ನೀಡಿದ್ದಾರೆ.
ಪುರಾತನ ದೇವಾಲಯಗಳ ಜೀರ್ಣೋದ್ಧಾರ, ಕೆರೆಗಳಿಗೆ ಕಾಯಕಲ್ಪ, ಆಧುನಿಕ ತಂತ್ರಜ್ಞಾನ ಬಳಸಿ ಸರದಿಸಾಲಿನಲ್ಲಿ ದೇವರದರ್ಶನದ ಸೌಲಭ್ಯ ಇತ್ಯಾದಿ ಅನುಪಮ ಕಾರ್ಯಗಳನ್ನು ಮಾಡಿದ್ದಾರೆ ಎಂದು ಅಭಿನಂದಿಸಿದರು.

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೊಸ ಯೋಜನೆಗಳನ್ನು ಪ್ರಕಟಿಸಿದರು. ಉಜಿರೆಯಲ್ಲಿ ನರ್ಸಿಂಗ್ ಕಾಲೇಜು ಪ್ರಾರಂಭ, ಎಂ.ಆರ್.ಐ. ಘಟಕ, ೨೦೦೦ನೇ ಮದ್ಯವರ್ಜನ ಶಿಬಿರ ಧರ್ಮಸ್ಥಳದಲ್ಲಿ ನವಂಬರ್ 6ರಂದು ನಡೆಯಲಿರುವುದಾಗಿ ತಿಳಿಸಿದರು. ಎಂದು ಹೆಗ್ಗಡೆಯವರು ಪ್ರಕಟಿಸಿದರು.
ಧರ್ಮಸ್ಥಳದ ಅಶೋಕನಗರದಲ್ಲಿ 2 ಕೋಟಿ 41 ಲಕ್ಷ ರೂ. ರಾಜ್ಯಸಭಾ ಸದಸ್ಯರ ಅನುದಾನದಿಂದ ರಸ್ತೆ, ಚರಂಡಿ, ತಡೆಗೋಡೆ ನಿರ್ಮಾಣ, ಬೀದಿದೀಪಗಳ ಅಳವಡಿಕೆ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಧರ್ಮೋತ್ಥಾನ ಟ್ರಸ್ಟ್ ಆಶ್ರಯದಲ್ಲಿ ಈಗಾಗಲೇ 300 ಪ್ರಾಚೀನ ದೇವಾಲಯಗಳ ಜೀರ್ಣೋದ್ಧಾರ ಪೂರೈಸಿದ್ದು, ಮುಂದಿನ ವರ್ಷ 13 ದೇವಾಲಯಗಳನ್ನು ಜೀರ್ಣೋದ್ಧಾರಕ್ಕಾಗಿ ಗುರುತಿಸಲಾಗಿದೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 25,500 ಕೋಟಿ ರೂ. ಬಿ.ಸಿ. ಟ್ರಸ್ಟ್ ಮೂಲಕ ವಿತರಿಸಲಾಗಿದೆ ಎಂದರು.

2026 ರ ಮಾರ್ಚ್ ಒಳಗೆ 1000 ಕೆರೆಗಳಿಗೆ ಕಾಯಕಲ್ಪ ನೀಡಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದರು.
ಬೆಳ್ತಂಗಡಿಯಲ್ಲಿ 7 ಎಕ್ರೆ ಜಾಗದಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಗೆ ನೂತನ ಕಟ್ಟಡ ನಿರ್ಮಿಸಲಾಗಿದೆ ಎಂದರು.
ಕ್ಷೇತ್ರದ ಎಲ್ಲಾ ಭಕ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು “ನಾವು ಸದಾ ನಿಮ್ಮೊಂದಿಗಿದ್ದೇವೆ” ಎಂದು ತಮಗೆ ಭರವಸೆ ನೀಡಿರುವುದರಿಂದ ಇನ್ನೂ ಹೆಚ್ಚಿನ ಸೇವಾ ಕಾರ್ಯಗಳನ್ನು ಮಾಡಲು ಉತ್ಸಾಹ ಮೂಡಿಬಂದಿದೆ ಎಂದರು.
ನೀವೆಲ್ಲರೂ ತೋರಿಸಿದ ಭಕ್ತಿ, ಪ್ರೀತಿ-ವಿಶ್ವಾಸ ಮತ್ತು ಗೌರವವನ್ನು ಶ್ರೀ ಸ್ವಾಮಿಗೆ ಅರ್ಪಿಸುವುದಾಗಿ ಹೆಗ್ಗಡೆಯವರು ತಿಳಿಸಿದರು.

ಶಾಸಕ ಹರೀಶ್ ಪೂಂಜ ಶುಭಾಶಂಸನೆ ಮಾಡಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರೈತರ ಆರ್ಥಿಕ ಸ್ವಾವಲಂಬನೆಗೆ ಹೆಗ್ಗಡೆಯವರು ಸೇವಾಕಾರ್ಯಗಳ ಮೂಲಕ ನೀಡಿದ ಪ್ರೋತ್ಸಾಹವನ್ನು ಸ್ಮರಿಸಿದರು.
ಸತ್ಯ, ಧರ್ಮ, ನ್ಯಾಯ-ನೀತಿಯ ಸನ್ಮಾರ್ಗದಲ್ಲಿ ನಡೆದು ಆದರ್ಶ ಸಮಾಜ ಸುಧಾರಕರಾಗಿ ಎಲ್ಲರಿಗೂ ಶಾಂತಿ ಮತ್ತು ಪ್ರೀತಿಯ ಸಂದೇಶ ನೀಡುವ ಹೆಗ್ಗಡೆಯವರು ಸರ್ವರ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದರು.
ಕಂಚಿಕಾಮಕೋಟಿ ಪೀಠದ ಪ್ರತಿನಿಧಿ ಗುರುಚರಣಮೂರ್ತಿ ಶುಭಾಶಂಸನೆ ಮಾಡಿದರು. ವೇದಿಕೆಯಲ್ಲಿ ಹೇಮಾವತಿ ವಿ ಹೆಗ್ಗಡೆ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಡಿ‌. ಹರ್ಷೇಂದ್ರ ಕುಮಾರ, ಡಿ.ಸುರೇಂದ್ರ ಕುಮಾರ್ ಹಾಗೂ ಇತರರು ಇದ್ದರು.
ಡಾ. ವಿಘ್ನರಾಜ ಮತ್ತು ಡಾ. ಪವನ್ ಸಂಪಾದಿಸಿದ “ವೃಷಭೇಶ್ವರ” ಗ್ರಂಥವನ್ನು ಸ್ವಾಮೀಜಿ ಲೋಕಾರ್ಪಣೆ ಮಾಡಿದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಪ್ರಾಂಶುಪಾಲ ಸುನಿಲ್ ಪಂಡಿತ್ ಕಾರ್ಯಕ್ರಮ ನಿರ್ವಹಿಸಿದರು.

Spread the love
  • Related Posts

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಶಿರಾಡಿ: ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧ‌ರ್ ಮರಕ, ಜನಾರ್ದನ ಕೆರಿಮಾರ್, ಸುರೇಶ್ ಎಂಬವರು ಸಕಲೇಶಪುರ…

    Spread the love

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

    Spread the love

    You Missed

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 454 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 122 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 53 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 40 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    • By admin
    • March 10, 2026
    • 72 views
    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 42 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”