ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ನೇತೃತ್ವದಲ್ಲಿ ಏಪ್ರಿಲ್ 14ರಿಂದ ಪ್ರಾರಂಭವಾಗಿ ಏಪ್ರಿಲ್ 21ರಂದು ಮಂಗಳವಾರ ಬ್ರಹ್ಮರಥೋತ್ಸವದ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ರಾತ್ರಿ ಒಳಾಂಗಣದಲ್ಲಿ ಶ್ರೀ ದೇವರ ಉತ್ಸವ ಮೂರ್ತಿಯ ಸುತ್ತುಬಲಿ ನಡೆದು ದೇವಸ್ಥಾನ ಹಾಗೂ ರಥಕ್ಕೆ ಪ್ರದಕ್ಷಿಣೆ ಬಂದು ರಥಾರೋಹಣ ನಡೆಯಿತು. ಆನೆಗಳು, ಬಸವ, ಚೆಂಡೆ ಬಳಗ ಹಾಗೂ ಸ್ಯಾಕ್ಸೋಫೋನ್ ವಾದ್ಯಮೇಳದ ನಾದಗಳ ನಡುವೆ ಸಹಸ್ರಾರು ಭಕ್ತರು “ಗೋವಿಂದಾ” ನಾಮಸ್ಮರಣೆಯೊಂದಿಗೆ ಬ್ರಹ್ಮರಥವನ್ನು ಅಣ್ಣಪ್ಪಗುಡಿಯ ಮುಂಭಾಗದವರೆಗೆ ಎಳೆದು ಮರಳಿ ಸ್ವಸ್ಥಾನಕ್ಕೆ ತಂದರು.ಭಕ್ತರು ರಥಕ್ಕೆ ಬಾಳೆಹಣ್ಣುಗಳನ್ನು ಎಸೆದು ಸ್ವಾಮಿಗೆ ಭಕ್ತಿಪೂರ್ವಕವಾಗಿ ಸಮರ್ಪಿಸಿದರು. ನಂತರ ವಸಂತಮಂಟಪದಲ್ಲಿ ವಸಂತಪೂಜೆ ಮತ್ತು ಅಷ್ಟಾವಧಾನ ಸೇವೆಗಳು ನೆರವೇರಿದವು.

ಏಪ್ರಿಲ್ 22ರಂದು ಸಂಜೆ ಶ್ರೀ ದೇವರು ನೇತ್ರಾವತಿ ನದಿಗೆ ಅವಭೃತ ಸ್ನಾನಕ್ಕೆ ತೆರಳಿ ಮರಳಿ ಬಂದು ದರ್ಶನ ಬಲಿ ಹಾಗೂ ಧ್ವಜಾವರೋಹಣದೊಂದಿಗೆ ಮಹೋತ್ಸವ ಸಂಪನ್ನಗೊಂಡಿತು.

ಡಾ. ಹೇಮಾವತಿ ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಸೇರಿದಂತೆ ಹೆಗ್ಗಡೆ ಕುಟುಂಬಸ್ಥರು, ಸಾವಿರಾರು ಭಕ್ತರು ಹಾಗೂ ಕ್ಷೇತ್ರದ ಸಿಬ್ಬಂದಿ ಈ ಮಹೋತ್ಸವದಲ್ಲಿ ಭಾಗವಹಿಸಿದ್ದರು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 4 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 7 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ