ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ನಡೆಯಲಿದೆ.

93ನೇ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ ನಡೆಯಲಿದೆ.

ವಸ್ತು ಪ್ರದರ್ಶನ ಮಂಟಪದಲ್ಲಿ ದಿನಾಂಕ 15/11/2025ನೇ ಶನಿವಾರ ಬೆಳಿಗ್ಗೆ 9.30ಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ ನೆರವೇರಿಸಲಿದ್ದಾರೆ.

18/11/2025ನೇ ಮಂಗಳವಾರದಂದು ಸರ್ವಧರ್ಮ ಸಮ್ಮೇಳನದ ಉದ್ಘಾಟನೆಯನ್ನು ಪರಮಪೂಜ್ಯ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸ್ವಯಂ ಪ್ರಕಾಶ್ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ಸಚಿವರಾದ ಡಾ.ಎಂ.ಬಿ. ಪಾಟೀಲ್ ಉದ್ಘಾಟಿಸಲಿದ್ದು, ಪ್ರಜಾವಾಣಿಯ ಉಪಸಂಪಾದಕರಾದ ಎಸ್. ಸೂರ್ಯಪ್ರಕಾಶ ಪಂಡಿತ್ ಮತ್ತು ಅಂಕಣಕಾರ & ರಾಷ್ಟ್ರೀಯ ಚಿಂತಕರಾದ ತನ್ವಿರ್ ಅಹಮ್ಮದ್ ಉಲ್ಲಾ ಉಪನ್ಯಾಸ ನೀಡಲಿದ್ದಾರೆ.

19/11/2025ನೇ ಬುಧವಾರ ಸಂಜೆ 5ರಿಂದ ಅಮೃತವರ್ಷಿಣಿ ಸಭಾಭವನದಲ್ಲಿ ವಿಶ್ವವಾಣಿ ಪತ್ರಿಕೆ ಮುಖ್ಯ ಸಂಪಾದಕರಾದ ವಿಶ್ವೇಶ್ವರ ಭಟ್ ಅಧ್ಯಕ್ಷತೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹಿರಿಯ ಸಾಹಿತಿ ಪ್ರೋ.ಪ್ರೇಮಶೇಖರ್ ಸಮ್ಮೇಳನ ಉದ್ಘಾಟಿಸಲಿದ್ದು, ಲೇಖಕಿ ಶಾಂತ ನಾಗಮಂಗಲ, ವಿವೇಕ ಹಂಸ ಮಾಸಪತ್ರಿಕೆಯ ಸಂಪಾದಕರಾದ ಡಾ.ರಘು.ವಿ, ಸಾಹಿತಿಗಳಾದ ಡಾ.ಬಿ.ಎಂ ಶರಬೇಂದ್ರ ಸ್ವಾಮಿ, ಧಾರವಾಡ ಇವರು ಉಪನ್ಯಾಸ ನೀಡಲಿದ್ದಾರೆ.









