ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ.

ಪ್ರಕರಣದ ಆರೋಪಿಯಾಗಿರುವ ವಿಠ್ಠಲ ಗೌಡ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ಅವಹೇಳನಕಾರಿಯಾಗಿ ಮಾತನಾಡದಂತೆ ಪ್ರತಿಬಂಧಕ ಆಜ್ಞೆಯನ್ನು ನ್ಯಾಯಾಲಯ ಮಾಡಿತ್ತು. ಈ ಅದೇಶವನ್ನು ಅವರು ಉಲ್ಲಂಘಿಸಿದದ್ದು ಈ ಬಗ್ಗೆ ಧರ್ಮಸ್ಥಳ ಪರವಾಗಿ ಶೀನಪ್ಪ ಅವರು ದೂರು ನೀಡಿದ್ದರು ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿಠ್ಠಲ ಗೌಡ ಅವರಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಆದೇಶ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ವಾದ ಮಂಡನೆ ಮಾಡಿದರು.





