ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಹಾವೇರಿ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ 311 ಶಾಲೆಗಳಿಗೆ ರೂ.1.87,23000- ಮೌಲ್ಯದ ಸುಮಾರು 2370 ಜೊತೆ ಡೆಸ್ಕ್ ಬೆಂಚುಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ನ.2 ರಂದು ಧರ್ಮಸ್ಥಳದಲ್ಲಿ ಚಾಲನೆ ನಿಡಲಾಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರವರು 311 ಶಾಲೆಗಳಿಗೆ ಪೀಠೋಪಕರಣಗಳನ್ನು ಸಾಗಿಸುವ ವಾಹನಕ್ಕೆ ಹಸಿರು ನಿಶಾನೆ ತೋರಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್.ಮಂಜುನಾಥ್, ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಯೋಜನಾಧಿಕಾರಿ ಪುಷ್ಪರಾಜ್, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್, ತಹಶೀಲ್ದಾರ್ ಮಹೇಶ್ ಜೆ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎಸ್, ವಿರೂಪಾಕ್ಷಪ್ಪ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.