ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಬೇಟಿ

ಬೆಳ್ತಂಗಡಿ: ಲೋಕೋಪಯೋಗಿ ಇಲಾಖೆ ಸಚಿವ, ರಾಜ್ಯ ಉಪಮುಖ್ಯಮಂತ್ರಿಯಾದ ಗೋವಿಂದ ಎಂ. ಕಾರಜೋಳ ಅವರು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಮಂಜುನಾಥ ಸ್ವಾಮಿ ದರ್ಶನ ಪಡೆದು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ಕ್ಷೇತ್ರದ ವತಿಯಿಂದ ಹೆಗ್ಗಡೆ ಆಪ್ತಕಾರ್ಯದರ್ಶಿ ಎ. ವೀ. ಶೆಟ್ಟಿ, ದೇವಳದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಸ್ವಾಗತಿಸಿದರು.

READ ALSO

ಈ ವೇಳೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್ ಜೆ., ತಾ. ಪಂ.ಇ.ಒ. ಕುಸುಮಾಧರ್ ಕೆ., ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಪ್ರಸಾದ್ ಅಜಿಲ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಮತ್ತಿತರರು ಉಪಸ್ಥಿತರಿದ್ದರು.