TRENDING
Next
Prev

ಡಾ|| ಹೇಮಾವತಿ ವಿ ಹೆಗ್ಗಡೆಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅದ್ದೂರಿ ಸ್ವಾಗತ

ಧರ್ಮಸ್ಥಳ: ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಇಂದು ನಡೆದ 40ನೇ ಘಟಿಕೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ವಿ ಹೆಗ್ಗಡೆಯವರು ಸಮಾಜ ಸೇವೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಗೌರವ ಡಾಕ್ಟರೇಟ್ ಗೌರವಕ್ಕೆ ಪಾತ್ರರಾದರು.

ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಮಾವತಿ ವಿ ಹೆಗ್ಗಡೆಯವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಇನ್ನುಗೌರವ ಡಾಕ್ಟರೇಟ್ ಸ್ವೀಕರಿಸಿ ಧರ್ಮಸ್ಥಳಕ್ಕೆ ಬರುತ್ತಿದ್ದಂತೆ ಹೇಮಾವತಿ ಹೆಗ್ಗಡೆಯವರಿಗೆ ಅದ್ದೂರಿ ಸ್ವಾಗತ ಸಿಕ್ಕಿತು. ತೆರೆದ ವಾಹನದಲ್ಲಿ ಅವರನ್ನು ಮೆರವಣಿಗೆ ಮಾಡಲಾಯಿತು.

READ ALSO