ಲಕ್ಷದೀಪೋತ್ಸವದಲ್ಲಿ ಶಿಕ್ಷಣ, ಜಾಗೃತಿಯ ಭಕ್ತಿ ಸಂದೇಶ ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ: ಡಾ,ಕೆ.ಸುಧಾಕರ್

ಧರ್ಮಸ್ಥಳ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಬರೀ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ, ಕೆ.ಸುಧಾಕರ್ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪ್ರಯುಕ್ತ ಶುಕ್ರವಾರ ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನ ಉದ್ಘಾಟಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಜಾನಪದ ಸೊಗಡನ್ನು ಶ್ಲಾಘಿಸಿದ ಅವರು, ಸಾಹಿತ್ಯ ಕ್ಷೇತ್ರಕ್ಕೆ ಮಹಾಕವಿ ರತ್ನಾಕರವರ್ಣಿ, ಮಂಜೇಶ್ವರ ಗೋವಿಂದ ಪೈ, ಶಿವರಾಮ ಕಾರಂತ ಮೊದಲಾದವರು ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಯಕ್ಷಗಾನ, ಭೂತ ಕೋಲ, ಕಂಬಳ ಮೊದಲಾದ ಜಾನಪದ ಕ್ರೀಡೆಗಳು ಹಾಗೂ ಕಲೆಗಳನ್ನು ನೆನಪಿಸಿಕೊಂಡರು.

ಸಾಹಿತಿಗಳು ಸಮಾಜವನ್ನು ತಿದ್ದುವ ದಾರ್ಶನಿಕರು. ನಾನು ಸಾಹಿತಿ ಅಲ್ಲವಾದರೂ ಸಾಹಿತ್ಯ ಮತ್ತು ಸಾಹಿತಿಗಳ ಬಗ್ಗೆ ಅಭಿಮಾನ ಮತ್ತು ಗೌರವ ಇದೆ. ಸಾಹಿತ್ಯದಿಂದ ಮಾತ್ರ ಸುಸ್ಥಿರ ಸಮಾಜ ನಿರ್ಮಾಣ ಎಂದ ಸಚಿವರು ಎಲ್ಲರಲ್ಲೂ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗಿರುವುದಕ್ಕೆ ವಿಷಾದಿಸಿದರು.

ಸಾಹಿತ್ಯಕ್ಕೆ ಕ್ಷೇತ್ರದಿಂದ ಪ್ರೋತ್ಸಾಹ ಎಸ್.ಡಿ.ಎಂ. ಪುಸ್ತಕ ಪ್ರಕಾಶನ ಮಾಲಿಕೆ ಮೂಲಕ ಅನೇಕ ಕೃತಿಗಳನ್ನು ಪ್ರಕಟಿಸಿ ಓದುವ ಹವ್ಯಾಸ ಬೆಳೆಸ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳದಿಂದ ಮಂಜುವಾಣಿ ಮತ್ತು ನಿರಂತರ ಎಂಬ ಎರಡು ಮಾಸ ಪತ್ರಿಕೆಗಳನ್ನು ಪ್ರಕಟಿಸಿ ಜ್ಞಾನ ದಾಸೋಹ ನೀಡಲಾಗುತ್ತದೆ. ಸುಜ್ಞಾನ ನಿಧಿ ಯೋಜನೆಯಡಿ 37,194 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಿ ಪ್ರೋತ್ಸಾಹಿಸಲಾಗುತ್ತದೆ. ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ಗ್ರಂಥಾಲಯದ ಅನೇಕ ಪುರಾತನ ಹಸ್ತಪ್ರತಿಗಳು, ಅಮೂಲ್ಯ ಗ್ರಂಥಗಳ ಹಾಗೂ ಅನುವಾದಿತ ಕೃತಿಗಳ ಸಂಗ್ರಹವಿದೆ. ಆಸಕ್ತರು ಇದರ ಸದುಪಯೋಗ ಪಡೆಯಬಹುದು. ಭಾಷಾ ಸಾಮರಸ್ಯ, ಸಹಬಾಳ್ವೆ ಹಾಗೂ ಭಾಷಾಭಿಮಾನದ ಜತೆಗೆ ಸಾಹಿತ್ಯದ ಮೂಲಕ ಆರೋಗ್ಯಪೂರ್ಣ ಸಮಾಶ ನಿರ್ಮಾಣಕ್ಕೆ ಧರ್ಮಸ್ಥಳದಿಂದ ನಿರಂತರ ಪ್ರೋತ್ಸಾಹ, ಸಹಕಾರ ನೀಡಲಾಗುತ್ತದೆ ಎಂದರು. ಧರ್ಮ ಮತ್ತು ಸಾಹಿತ್ಯ ಸಮಸ್ತ ಮಾನವ ಸಮಾಜದ ಏಳಿಗೆಗೆ ಪೂರಕ ಮತ್ತು ಪ್ರೇರಕವಾಗಿದೆ. ವ್ಯಕ್ತಿ ಮತ್ತು ಸಮಾಜಕ್ಕೆ ಹಿತವನ್ನು ಉಂಟುಮಾಡುವುದೇ ಸಾಹಿತ್ಯ ಎಂದು ಹೆಗ್ಗಡೆ ಹೇಳಿದರು.

ಅಧ್ಯಕ್ಷತೆ ವಹಿಸಿದ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ ಮಾತನಾಡಿ, ಸಾಹಿತ್ಯದಿಂದ ಅಂತರಂಗದ ಶುದ್ದೀಕರಣವಾಗುತ್ತದೆ. ಸಾಹಿತ್ಯ ರಚನೆಯಲ್ಲಿ ಶಿ ತತ್ವದ ಧಾತು ಇರಬೇಕು. ಅಧ್ಯಾತ್ಮ ಸಾಹಿತ್ಯ ಮತ್ತು ರಂಜನೀಯ ಸಾಹಿತ್ಯದ ಮಧ್ಯೆ ಸಮನ್ವಯ ಅಗತ್ಯ. ಅಂತಃಕರಣದ ಶುದ್ದೀಕರಣದಿಂದ ಲೋಕದ ಶುದ್ದೀಕರಣವೂ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಐತಿಹಾಸಿಕ ಸಾಹಿತ್ಯ ಸೃಷ್ಟಿಯಲ್ಲಿ ಎದುರಾಗುವ ಸವಾಲುಗಳು ಎಂಬ ವಿಷಯದ ಬಗ್ಗೆ ಸಾಗರದ ಡಾ. ಗಜಾನನ ಶರ್ಮಾ, ಸಾಹಿತ್ಯ ಸಂವೇದನೆ ಮತ್ತು ಮಹಿಳಾ ಅಭಿವ್ಯಕ್ತಿ ವಿಷಯದಲ್ಲಿ ಚಿತ್ರದುರ್ಗದ ಡಾ. ಪಿ.ಚಂದ್ರಿಕಾ ಹಾಗೂ ಶಿಕ್ಷಣ ಮತ್ತು ಸಂಸ್ಕೃತಿ ರಕ್ಷಣೆಯಲ್ಲಿ ಸಾಹಿತ್ಯದ ಪಾತ್ರ ಎಂಬ ವಿಷಯದ ಬಗ್ಗೆ ಡಾ. ಕೆ.ಪಿ. ಪುತ್ತೂರಾಯ ಉಪನ್ಯಾಸ ನೀಡಿದರು.

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನವನ್ನು ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿ ದರು. ಡಾ.ಡಿ.ವೀರೇಂದ್ರ ಹೆಗ್ಗಡೆ, ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ, ಡಾ. ಗಜಾನನ ಶರ್ಮಾ, ಡಾ. ಪಿ.ಚಂದ್ರಿಕಾ, ಡಾ. ಕೆ.ಪಿ. ಪುತ್ತೂರಾಯ, ಹೇಮಾವತಿ ವಿ. ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

ಇಂದು ಸಮವಸರಣ ಪೂಜೆ

ಹೊಸಕಟ್ಟೆ, ಕೆರೆಕಟ್ಟೆ, ಲಲಿತೋದ್ಯಾನ, ಕಂಚಿಮಾರುಕಟ್ಟೆ, ಗೌರಿಮಾರುಕಟ್ಟೆ ಉತ್ಸವಗಳೊಂದಿಗೆ ಐದು ದಿನಗಳ ಲಕ್ಷದೀಪೋತ್ಸವ ಸಮಾಪನಗೊಂಡಿದೆ. ಶನಿವಾರ ಸಂಜೆ 6.30ರಿಂದ ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜಾ ಕಾರ್ಯಕ್ರಮ ನಡೆಯಲಿದೆ.

ಹೇಮಾವತಿ ವಿ. ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು. ಉಜಿರೆ ರುಡ್‌ಸೆಟ್ ಸಂಸ್ಥೆ ನಿರ್ದೇಶಕ ಎಂ.ಸುರೇಶ್ ವಂದಿಸಿದರು. ಎಸ್ ಡಿಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸಂಪತ್ ಕುಮಾರ್ ನಿರೂಪಣೆ ಮಾಡಿದರು.

Spread the love
  • Related Posts

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ