ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಡಾ.ಡಿ.ವೀರೇಂದ್ರಹೆಗ್ಗಡೆಯವರನ್ನು ಬೇಟಿಯಾಗಿ, ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ SC,ST ರಾಜ್ಯ ಉಪಾಧ್ಯಕ್ಷರಾದ ಲಕ್ಷಿ ನಾರಾಯಣ್, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಜನ್ ಜಿ ಗೌಡ, ಪ್ರಧಾನ ಕಾರ್ಯದರ್ಶಿ ದಯಾನಂದ ಪಿ ಬೆಳಾಲ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಭರತ್ ಕುಮಾರ್, ಅಭಿನಂದನ್ ಹರೀಶ್ ಕುಮಾರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.