ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ಇದರ ಮಾಸಿಕ ಸಭೆ ಹಾಗೂ ಗಿಡನಾಟಿ ಕಾರ್ಯಕ್ರಮ

ಧರ್ಮಸ್ಥಳ: ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ಇದರ ಮಾಸಿಕ ಸಭೆ ಇಂದು ಶಿಶಿಲದ ನಾಗನಡ್ಕ ಸಮುದಾಯ ಭವನದಲ್ಲಿ ಜರುಗಿತು.
ಕೇವಲ ಮಾಸಿಕ ಸಭೆಗೆ ಸೀಮಿತವಾಗಿಸದೆ ಸುತ್ತಮುತ್ತಲಿನ 4ಶಾಲೆಗಳಲ್ಲಿ 150ಕ್ಕೂ ಅಧಿಕ ಗಿಡಗಳನ್ನು ನೆಡುವ ಮಾಡುವ ಮೂಲಕ ಹಸಿರು ಕ್ರಾಂತಿಗೆ ಮುಂದಡಿ ಇಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಲಯ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಕಾರ್ಯಕ್ರಮ ಉದ್ಘಾಟಿಸಿದರು. ವಲಯ ಉಪ ವಿಭಾಗ ಅರಣ್ಯಾಧಿಕಾರಿ ಶಿಶಿಲ ಶಾಲಾ ಮುಖ್ಯೋಪಾಧ್ಯಾಯರಿಗೆ ಸಸಿಗಳನ್ನು ಹಸ್ತಾಂತರಿಸುವ ಮುಖೇನ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು.

READ ALSO

ವಲಯ ಅರಣ್ಯಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು , ಶಾಲಾ ಮೇಲುಸ್ತುವಾರಿ ಸಮಿತಿ, ಊರ ನಾಗರಿಕರ ಸಹಭಾಗಿತ್ವದಲ್ಲಿ150ಕ್ಕೂ ಅಧಿಕ ಫಲ, ಪುಷ್ಪದ ಗಿಡಗಳನ್ನು ನಾಟಿ ಮಾಡಲಾಯಿತು.

ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸಂಟ್ ಪಾಯ್ಸ್, ವಿಪತ್ತು ನಿರ್ವಹಣಾ ಘಟಕದ ಪ್ರಾದೇಶಿಕ ನಿರ್ದೇಶಕ ಜೈವಂತ್ ಪಟಗಾರ್, ವಲಯ ಅರಣ್ಯಾಧಿಕಾರಿಗಳು, ಶಾಲಾ ಮುಖ್ಯೋಪಾದ್ಯಾಯರು, ವಲಯ ಸ್ವಚ್ಚತಾ ಸೇನಾನಿಗಳು, ಊರ ನಾಗರಿಕರು ಹಾಗೂ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ಇದರ ಸದಸ್ಯರು ಉಪಸ್ಥಿತರಿದ್ದರು.