TRENDING
Next
Prev

ಧರ್ಮಸ್ಥಳ 15ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಚತುಷ್ಪಥ ರಸ್ತೆ ಲೋಕಾರ್ಪಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಪರ್ಕಿಸುವ ಸಲುವಾಗಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾದ 15 ಕೋ.ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿಯನ್ನು ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳರವರು ಲೋಕಾರ್ಪಣೆಗೊಳಿಸಿದರು.

ಲೋಕೋಪಯೋಗಿ ಇಲಾಖೆಯಿಂದ ಮಂಜೂರುಗೊಂಡ 15 ಕೋ.ರೂ. ಮೊತ್ತದಲ್ಲಿ 2 ಕಿ.ಮೀ. ಚತುಷ್ಪಥ ರಸ್ತೆಗೆ ನಿರ್ಮಾಣಗೊಂಡಿದೆ. ಧರ್ಮಸ್ಥಳ ಸ್ನಾನಘಟ್ಟ ಸಮೀಪದಿಂದ ಶ್ರೀ ಕ್ಷೇ.ಧ.ಪ್ರೌಢ ಶಾಲೆವರೆಗೆ ಚತುಷ್ಪಥ ರಸ್ತೆ ನಿರ್ಮಿಸಲಾಗಿದ್ದು ರಸ್ತೆ ಮಧ್ಯೆ 2.50 ಮೀಟರ್ ಡಿವೈಡರ್ ನಿರ್ಮಿಸಲಾಗಿದೆ.

READ ALSO

ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರ. ಕಾರ್ಯದರ್ಶಿ ಶ್ರೀನಿವಾಸ್ ರಾವ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.