ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕಿನ ನಾರಾಯಣದಾಸರಹಳ್ಳಿ ರಾಧಾಕೃಷ್ಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆರ್ಥಿಕ ನೆರವು ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 150000/- ಮೊತ್ತದ ಡಿ.ಡಿ ಯನ್ನು ಜಿಲ್ಲಾ ನಿರ್ದೇಶಕರಾದ ವಸಂತ್.ಬಿ ಯವರು ವಿತರಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ದೇವಸ್ಥಾನ ಸಮಿತಿ ಅಧ್ಯಕ್ಷರಾದ ನಾಗರಾಜ್, ಕಾರ್ಯದರ್ಶಿ ಮಂಜುನಾಥ್, ಮೇಲ್ವಿಚಾರಕ ರಮೇಶ್, ಒಕ್ಕೂಟದ ಅಧ್ಯಕ್ಷರಾದ ಆನಂದ್ ಪದಾಧಿಕಾರಿ ನಾಗವೇಣಮ್ಮ, ಸೇವಾಪ್ರತಿನಿಧಿ ನಳಿನಾ ದೇವಸ್ಥಾನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.