ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರಿಗೆ ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ ಹಾಗೂ ಸಮಾಜ ಸೇವಾ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಅಪೂರ್ವ ಸೇವೆಯನ್ನು ಪರಿಗಣಿಸಿ, ಸ್ವಿಟ್ಜರ್‌ಲ್ಯಾಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿ ಸನ್ಮಾನಿಸಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಜ್ಞಾನವಿಕಾಸ’ ಕಾರ್ಯಕ್ರಮದ ಅಧ್ಯಕ್ಷರಾಗಿ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಮಹಿಳಾ ಸಬಲೀಕರಣ, ಸ್ವಾವಲಂಬನೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ ನೀಡಿದ ವಿಶಿಷ್ಟ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ರಾಜ್ಯಮಟ್ಟದ ಪುನಶ್ಚೇತನ ಕಾರ್ಯಾಗಾರದಲ್ಲಿ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನ ಅಧ್ಯಕ್ಷ ಫಿಲಿಪ್ ಥೆವೆನೋಟ್ ಆನ್‌ಲೈನ್ ಮೂಲಕ ಗೌರವ ಡಾಕ್ಟರೇಟ್ ಘೋಷಣೆ ಮಾಡಿದರು. ಬಳಿಕ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್ ಪರವಾಗಿ ಅವಿನಾಶ್ ಗುಪ್ತಾ ಧರ್ಮಸ್ಥಳದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವಿನಾಶ್ ಗುಪ್ತಾ, “ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರನ್ನು ಗೌರವಿಸುವುದು ನಮ್ಮ ಸಂಸ್ಥೆಗೆ ಹೆಮ್ಮೆಯ ಸಂಗತಿ. ಅವರು ಕೇವಲ ಒಬ್ಬ ವ್ಯಕ್ತಿಯಲ್ಲ, ಲಕ್ಷಾಂತರ ಜನರ ಬದುಕಿನಲ್ಲಿ ಆಶಾಕಿರಣವಾಗಿ, ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿರುವ ಮಹಾನ್ ವ್ಯಕ್ತಿತ್ವ. ಜ್ಞಾನವಿಕಾಸ, ವಾತ್ಸಲ್ಯ, ಮಾಸಾಶನ, ಸಿರಿ ಗ್ರಾಮೋದ್ಯೋಗ ಸೇರಿದಂತೆ ಅನೇಕ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಮಹಿಳೆಯರಲ್ಲಿ ಆತ್ಮವಿಶ್ವಾಸ, ಸ್ವಾಭಿಮಾನ ಹಾಗೂ ಆರ್ಥಿಕ ಸ್ವಾವಲಂಬನೆಯನ್ನು ಬೆಳೆಸುವಲ್ಲಿ ಅವರ ಪಾತ್ರ ಅನನ್ಯ. ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆ, ಸಾಹಿತ್ಯ ಹಾಗೂ ಕಲಾ ಕ್ಷೇತ್ರಗಳಲ್ಲಿಯೂ ಅವರ ಕೊಡುಗೆ ಅಪಾರವಾಗಿದೆ. ಈ ಎಲ್ಲ ಸೇವೆಗಳನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗಿದೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿಗಳಾದ ಡಾ. ಹರೀಶ್ ಕೃಷ್ಣ ಸ್ವಾಮಿ, ಉದಯಕುಮಾರ್ ಶೆಟ್ಟಿ, ಸಂಪತ್ ಸಾಮ್ರಾಜ್ಯ, ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್., ಹಣಕಾಸು ಅಧಿಕಾರಿ ಶಾಂತಾರಾಮ್ ಆರ್. ಪೈ, ಯೋಜನೆಯ ಪ್ರಾದೇಶಿಕ ನಿರ್ದೇಶಕರು, ನಿರ್ದೇಶಕರು, ಯೋಜನಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love
  • Related Posts

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    You Missed

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 2 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 5 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 6 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 10 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 11 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ