ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ

ಧರ್ಮಸ್ಥಳ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು, ಹಾಗೂ ಗ್ರಾಮ ಪಂಚಾಯತ್ ಧರ್ಮಸ್ಥಳ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನ ಮತ್ತು ಪಟ್ಟಣಕ್ಕೆ 26.06 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಮಾನ್ಯ ನಗರಾಭಿವೃದ್ಧಿ ಇಲಾಖಾ ಸಚಿವರಾದ ಸನ್ಮಾನ್ಯ ಶ್ರೀ ಬಿ.ಎ.ಭೈರತಿ ಬಸವರಾಜ ಇವರು ಶಿಲಾನ್ಯಾಸ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಪೂಜ್ಯ ಖಾವಂದರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಶೋರಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಮಿತ್ರರಾದ ಶ್ರೀ ನರಸಿಂಹ ರಾಜು ಗೌಡ, ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಹರಿಕೃಷ್ಣ ಬಂಟ್ವಾಳ, ವಿಧಾನಪರಿಷತ್ ಶಾಸಕರು ಶ್ರೀ ಪ್ರತಾಪ್ ಸಿಂಹ ನಾಯಕ್ ಹಾಗೂ ಇಲಾಖಾ ಅಧಿಕಾರಿಗಳು, ಸ್ಥಳೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

READ ALSO