‘ನಶಾ ಮುಕ್ತ ಭಾರತ’ಕ್ಕಾಗಿ ಎಬಿವಿಪಿ ಸಂಕಲ್ಪ: ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವತಿಯಿಂದ ‘ನಶಾ ಮುಕ್ತ ಭಾರತ’ಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

READ ALSO

ಕಾರ್ಯಕ್ರಮ ದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಎಬಿವಿಪಿ ರಾಜ್ಯ ಉಪಾಧ್ಯಕ್ಷ ಕೇಶವ ಬಂಗೇರ, ಧರ್ಮಸ್ಥಳ ಠಾಣಾ ಸಬ್ ಇನ್ಸ್ಪೆಕ್ಟರ್ ಪವನ್ ನಾಯಕ್, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ, ವಕೀಲ ಯತೀಶ್ ಶೆಟ್ಟಿ, ಎಬಿವಿಪಿ ವಿಭಾಗ ಸಂಚಾಲಕ ಆಶೀಶ್ ಅಜ್ಜಿಬೆಟ್ಟು, ಎಬಿವಿಪಿ ಬೆಳ್ತಂಗಡಿ ನಗರ ಕಾರ್ಯದರ್ಶಿ ಸುಮಂತ್, ಎಬಿವಿಪಿ ಪ್ರಮುಖರಾದ ಪೃಥ್ವಿಶ್, ಶರತ್ ಎಬಿವಿಪಿ ಹಿರಿಯ ಕಾರ್ಯಕರ್ತರಾದ ಪ್ರಜ್ವಲ್, ಜಗದೀಶ್, ವಿನೋದ್ ರಾಜ್, ತೀಕ್ಷಿತ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸಾರ್ವಜನಿಕರು ಸಹಿ ಹಾಕುವ ಮೂಲಕ ಎಬಿವಿಪಿ ಅಭಿಯಾನಕ್ಕೆ ಬೆಂಬಲ ಸೂಚಿಸಿದರು.