ಬೆಳ್ತಂಗಡಿ: ಡ್ರಗ್ಸ್ ದಂಧೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಠಾಣಾಧಿಕಾರಿಯವರ ಮೂಲಕ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭ ಬಿಜೆಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷ ಯಶವಂತ್ ಗೌಡ ಬೆಳಾಲು, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್ ಮಾರ್ನಾಡ್, ಬಿಜೆಪಿ ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ.ಎಸ್, ಯುವ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಯತೀಶ್ ಶೆಟ್ಟಿ, ಯುವ ಮೋರ್ಚಾ ಮಂಡಲ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಕಾರ್ಯದರ್ಶಿ ಸುಕೇಶ್ ಪಡ0ಗಡಿ, ಕಾರ್ಯಕಾರಿಣಿ ಸದಸ್ಯರಾದ ಸುಧಾಕರ್ ಕಣಿಯೂರು, ಅಶೋಕ್ ಸಪಲ್ಯ ಉಪಸ್ಥಿತರಿದ್ದರು.