ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.

ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡಲಿದ್ದಾರೆ.

ಸಭಾಕಾರ್ಯಕ್ರಮ:
ಅಪರಾಹ್ನ ನಾಲ್ಕು ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕರಾದ ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮತ್ತು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಶುಭಾಶಂಸನೆ ಮಾಡುವರು. ಈ ಸಂದರ್ಭ ಕ್ಷೇತ್ರದ ಹಿರಿಯ ನೌಕರರ ಸನ್ಮಾನ ನಡೆಯಲಿದೆ. ಧರ್ಮಾಧಿಕಾರಿ ಡಾ. ಹೆಗ್ಗಡೆ ಅವರು ಹೊಸ ಯೋಜನೆಗಳನ್ನು ಪ್ರಕಟಿಸುವರು.1968 ರ .24 ರಂದು ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದ ಹೆಗ್ಗಡೆ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರುಡ್‌ಸೆಟ್ ಸಂಸ್ಥೆಗಳು, ಕೆರೆಗಳಿಗೆ ಕಾಯಕಲ್ಪ, ಉಚಿತ ಸಾಮೂಹಿಕ ವಿವಾಹ ಸಮಾರಂಭ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಹಾಗೂ ಆಯುರ್ವೇದಕ್ಕೆ ಪ್ರೋತ್ಸಾಹ, ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ, ರುದ್ರಭೂಮಿ ಮೊದಲಾದ ವಿನೂತನ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನದ ಮೂಲಕ ಉನ್ನತ ಸೇವೆ-ಸಾಧನೆ ಮಾಡಿ ಎಲ್ಲರ ಪ್ರೀತಿ-ವಿಶ್ವಾಸ ಮತ್ತು ಗೌರವಕ್ಕೆ ಪಾತ್ರರಾಗಿದ್ದಾರೆ.

ಶ್ರೀ ಕ್ಷೇತ್ರದಲ್ಲಿ ಹಬ್ಬದ ವಾತಾವರಣ: ದೀಪಾವಳಿ ಹಬ್ಬದ ಜೊತೆಗೆ ಧರ್ಮಸ್ಥಳದಲ್ಲಿ ಪಟ್ಟಾಭಿಷೇಕದ ವರ್ಧಂತ್ಯುತ್ಸವದ ಅಂಗವಾಗಿ ಎಲ್ಲೆಲ್ಲೂ ಸಂಭ್ರಮ- ಸಡಗರದ ವಾತಾವರಣವಿದೆ. ಬಸದಿ, ದೇವಸ್ಥಾನ, ಬೀಡು (ಹೆಗ್ಗಡೆಯವರ ನಿವಾಸ) ಅನ್ನಪೂರ್ಣ ಹಾಗೂ ವಸತಿಛತ್ರಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳು ಮತ್ತು ಪ್ರಾಕೃತಿಕ ಪರಿಕರಗಳಿಂದ ಅಲಂಕರಿಸಿದ್ದು, ಕಣ್ಮನ ಸೆಳೆಯುತ್ತಿವೆ.

Spread the love
  • Related Posts

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಸೌತಡ್ಕ : ಮುಂಗಾರಿನ ಮಳೆಯ ಅಬ್ಬರ ಇಳಿದು ಚುಮುಚುಮು ಚಳಿಗಾಲದ ಆರಂಭದಲ್ಲಿ ಬರುವ ಹಬ್ಬವೇ ದೀಪಾವಳಿ. ಈ ಹಬ್ಬ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ…

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 11 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ