ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ 73ನೇ ಹುಟ್ಟುಹಬ್ಬದ ಪ್ರಯುಕ್ತ ವಾತ್ಸಲ್ಯ ಕುಟುಂಬಗಳಿಗೆ ನೆರವಿನ ಆಸರೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ 73ನೇ ಹುಟ್ಟುಹಬ್ಬದ ಪ್ರಯುಕ್ತ ‘ವಾತ್ಸಲ್ಯ ಕುಟುಂಬಕ್ಕೆ ಸಹಾಯ ನೀಡುವ ಕಾರ್ಯಕ್ರಮಕ್ಕಾಗಿ ರಾಜ್ಯಾದ್ಯಂತ ವಿತರಿಸಲ್ಪಡುವ ವಾತ್ಸಲ್ಯ ಕಿಟ್ ಸಾಗಿಸುವ ಟ್ರಕ್‌ಗಳಿಗೆ ಚಾಲನೆ ನ.25 ರಂದು ಧರ್ಮಸ್ಥಳ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.

ಧರ್ಮಸ್ಥಳದ ಧಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಜ್ನಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ ಹೆಗ್ಗಡೆ ಉದ್ಘಾಟಿಸಿದರು.

READ ALSO

ಉಜಿರೆ ಶ್ರೀ. ಧ.ಮಂ ಶಿಕ್ಷಣ ಸಮಸ್ಥೆಗಳ ಕಾರ್ಯದರ್ಶಿ ಡಿ ಹರ್ಷೇಂದ್ರ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಟ್ರಸ್ಟಿ ಡಾ. ಬಿ ಯಶೋವರ್ಮ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಅಧ್ಯಕ್ಷ ವಿ.ರಾಮಸ್ವಾಮಿ, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಗೌರವ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್ ಹೆಚ್ ಮಂಜುನಾಥ್, ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ ಪಾಯಿಸ್, ಮಾನವ ಸಂಪನ್ಮೂಲಾಭಿವೃದ್ಧಿ ವಿಭಾಗದ ನಿರ್ದೇಶಕಿ ಮಮತಾ ರಾವ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.