DYSP ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಹಲವು ಅಧಿಕಾರಿಗಳಿಗೆ ಕೋರ್ಟ್ ಸಮನ್ಸ್ ಜಾರಿ!

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮಾಜಿ ಸಚಿವ ಕೆ.ಜೆ. ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ ಪ್ರಸಾದ್‌ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು ‘ಬಿ’ ರಿಪೋರ್ಟ್ ಸಲ್ಲಿಸಿ, ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ಮನವಿ ಸಲ್ಲಿಸಿದ್ದರು. ಆದರೆ, ವರದಿ ಪರಿಶೀಲಿಸಿದ ನ್ಯಾಯಾಲಯ ಸಿಬಿಐ ವರದಿಯನ್ನು ತಿರಸ್ಕರಿಸಿದ್ದು, ಆರೋಪಿತರ ವಿರುದ್ಧ ಐಪಿಸಿ ಸೆಕ್ಷನ್ 306 ಅಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ. ಹಾಗೆಯೇ ಆರೋಪಿತರಾದ ಕೆ.ಜೆ.ಜಾರ್ಜ್, ಪ್ರಣವ್ ಮೊಹಂತಿ ಹಾಗೂ ಎ.ಎಂ.ಪ್ರಸಾದ್‌ ಅವರಿಗೆ ಸೆ.28ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಸಿಬಿಐ ಅಧಿಕಾರಿಗಳು ಆರೋಪಿತರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ವರದಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಾಲಯ ಆತ್ಮಹತ್ಯೆ ಪ್ರಚೋದನೆಗೆ ಸಾಕಷ್ಟು ಸಾಕ್ಷ್ಯಗಳಿದ್ದರೂ ‘ಬಿ’ ವರದಿ ನೀಡಿರುವ ವಿಚಾರ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಅಭಿಪ್ರಾಯಪಟ್ಟಿದೆ.

ಮಂಗಳೂರಿನ ಐಜಿಪಿ ಕಚೇರಿಯಲ್ಲಿ ಡಿವೈಎಸ್‌ಪಿ ಆಗಿದ್ದ ಎಂ.ಕೆ. ಗಣಪತಿ ಅವರ ಮೃತದೇಹ 2016ರ ಜುಲೈ 7ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅದಕ್ಕೂ ಮುನ್ನ ಸ್ಥಳೀಯ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಗಣಪತಿ, ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಎ.ಎಂ.ಪ್ರಸಾದ್, ಪ್ರಣವ್ ಮೊಹಂತಿ ಕಿರುಕುಳ ನೀಡುತ್ತಿರುವ ಕುರಿತು ಆರೋಪ ಮಾಡಿದ್ದರು. ರಾಜ್ಯ ಸರ್ಕಾರ ಮೊದಲಿಗೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ಅಧಿಕಾರಿಗಳು ಆರೋಪಿತರಿಗೆ ಕ್ಲೀನ್ ಚಿಟ್ ನೀಡಿದ್ದರು. ಗಣಪತಿ ಕುಟುಂಬದವರು ಕಾನೂನು ಹೋರಾಟ ನಡೆಸಿದ್ದರಿಂದ 2017ರಲ್ಲಿ ಸುಪ್ರೀಂಕೋರ್ಟ್ ಪ್ರಕರಣವನ್ನು ಚೆನ್ನೈ ಸಿಬಿಐ ಅಧಿಕಾರಿಗಳಿಗೆ ವಹಿಸಿತ್ತು. ಪ್ರಕರಣದ ತನಿಖೆ ನಡೆಸಿದ ಚೆನ್ನೈನ ಸಿಬಿಐ ಅಧಿಕಾರಿಗಳು ಆರೋಪಿತರ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯ ಲಭ್ಯವಿಲ್ಲ ಎಂದು ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು

Spread the love
  • Related Posts

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮರಾಗಿದ್ದಾರೆ. ಜಮ್ಮುವಿನ ಪೂಂಚ್‌ನಲ್ಲಿ ಗಸ್ತು ತಿರುಗುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಸೇನೆಯ 25 ರಾಷ್ಟ್ರೀಯ ರೈಫಲ್ಸ್‌ನ ಹವಾಲ್ದಾರ್ ವಿ. ಸುಬ್ಬಯ್ಯ ವರಿಕುಂಟಾ ಅವರು ಸಾವನ್ನಪ್ಪಿದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಉತ್ತರ…

    Spread the love

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    ಮುರುಡೇಶ್ವರ: ಕೋಲಾರದ ಮುಳಬಾಗಿಲು ಮೊರಾರ್ಜಿದೇಸಾಯಿ ವಸತಿ ಶಾಲೆಯ ಮಕ್ಕಳ ಪ್ರವಾಸ ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದ ಸಮುದ್ರ ವೀಕ್ಷಿಸುತ್ತಿದ್ದ ವೇಳೆ ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದಾರೆ. ಶ್ರಾವಂತಿ, ದೀಕ್ಷಾ, ಲಾವಣ್ಯ ಈ ಮೂವರು ವಿದ್ಯಾರ್ಥಿನೀಯರು ನೀರಿನಲ್ಲಿ ಮುಳುಗಿದ್ದು ಶ್ರಾವಂತಿ ಎಂಬವಳು ಸಾವನ್ನಪ್ಪಿದ್ದಾಳೆ.…

    Spread the love

    You Missed

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    • By admin
    • December 10, 2024
    • 49 views
    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    • By admin
    • December 10, 2024
    • 68 views
    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ ಪೋಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ, ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು

    • By admin
    • December 10, 2024
    • 30 views
    ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ ಪೋಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ, ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು

    ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ

    • By admin
    • December 10, 2024
    • 45 views
    ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ

    ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

    • By admin
    • December 10, 2024
    • 99 views
    ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

    ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ

    • By admin
    • December 9, 2024
    • 74 views
    ಪೆರ್ಲ – ಬೈಪಾಡಿ  ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ  ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ