ಬೆಂಗಳೂರು: ಶಾಲಾ ಆರಂಭದ ಕುರಿತಾಗಿ ಸಾಕಷ್ಟು ಗೊಂದಲಗಳಿದ್ದು, ಸೆಪ್ಟಂಬರ್ 21 ರ ಬಳಿಕ ಶಾಲೆಗಳು ಆರಂಭ ಅನ್ನೋ ಸುದ್ದಿಗಳು ಹರಿದಾಡುತ್ತಿವೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ವೊಂದನ್ನು ಹಾಕಿದ್ದು ಅದರಲ್ಲಿ ಪತ್ರಿಕಾ ಪ್ರಕಟಣೆಯ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಪ್ರಕಟಣೆಯಲ್ಲಿ “ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಕೋವಿಡ್ -19 ಹಬ್ಬುತ್ತಿರುವ ಪ್ರಮಾಣ ಕಡಿಮೆಯಾಗದ ಕಾರಣ ಈಗಿನ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಶಾಲೆಗಳಿಗೆ ಬರೋದು ಕ್ಷೇಮವಲ್ಲ ಎಂದು ಅಭಿಪ್ರಾಯ ಪಡಲಾಗಿದೆ. ಹಾಗಾಗಿ ಸೆಪ್ಟಂಬರ್- 2020 ಅಂತ್ಯದವರೆಗೆ ಪ್ರೌಢಶಾಲೆ ಹಾಗೇ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳನ್ನು ಶಾಲೆ ಅಥವಾ ಕಾಲೇಜಿಗೆ ಭೇಟಿ ನೀಡಲು ಅನುಮತಿ ನೀಡದೇ ಇರೋದಕ್ಕೆ ತೀರ್ಮಾನಿಸಲಾಗಿದೆ” ಎಂದು ತಿಳಿಸಲಾಗಿದೆ.