ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನ ಹೆಣ್ಣು ಮರಿಗೆ ಜನ್ಮ ನೀಡಿದ ಧರ್ಮಸ್ಥಳದ ಲಕ್ಷ್ಮೀ ಆನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಸದಾ ಭಕ್ತರನ್ನು ತನ್ನೆಡೆಗೆ ಆಕರ್ಷಿಸುವ, ಎಲ್ಲರೊಂದಿಗೂ ಪ್ರೀತಿಯಿಂದ ಬೆರೆಯುತ್ತಿರುವ ಧರ್ಮಸ್ಥಳದ ಲಕ್ಷ್ಮೀ ಆನೆ ಮುದ್ದಾದ ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದ್ದಾಳೆ.

ಲಕ್ಷ್ಮೀ ಹೆಣ್ಣು ಮರಿಗೆ ಜನ್ಮ ನೀಡಿರೋದು ದೇವಾಲಯದ ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ಭಕ್ತರ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದೆ.

READ ALSO

ತುಂಟಾಟದಿಂದ ಧರ್ಮಸ್ಥಳದಲ್ಲಿ ಲಕ್ಷ್ಮೀ ಅಚ್ಚುಮೆಚ್ಚಾಗಿತ್ತು. ಅಲ್ಲದೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಪ್ರೀತಿ ಪಾತ್ರವಾಗಿತ್ತು. ವೀರೇಂದ್ರ ಹೆಗ್ಗಡೆಯವರು ಇಂದು ಆನೆ ಮರಿಯನ್ನು ವೀಕ್ಷಿಸಿ ಮುದ್ದಾಡಿದರು.

ಇನ್ನು ಈ ಲಕ್ಷ್ಮೀ ಆನೆಯನ್ನು ವಿಜಯನಗರ ಶಾಸಕ ಆನಂದ್ ಸಿಂಗ್ ಅವರು 2009 ರಲ್ಲಿ ಧರ್ಮಸ್ಥಳ ದೇಗುಲಕ್ಕೆ ಕೊಡುಗೆಯಾಗಿ ನೀಡಿದ್ದರು. ಇದೀಗ ಆನೆ ಮರಿಗೆ ಜನ್ಮ ನೀಡಿರೋದು ಎಲ್ಲರ ಸಂತಸಕ್ಕೆ ಕಾರಣವಾಗಿದ್ದು, ಆನೆಯ ಮಾವುತ ಆನೆಯ ಆರೈಕೆಯಲ್ಲಿ ತೊಡಗಿದ್ದಾರೆ