ಮಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2020 ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆ 2020ಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಚುನಾವಣೆಯು ಪಕ್ಷರಹಿತ ಚುನಾವಣೆ ಯಾಗಿರುತ್ತದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ಸಾವಿರ 1993ರ ಪ್ರಕರಣ 7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ.
🔹ರಾಜಕೀಯ ಪಕ್ಷಗಳು ಸಭೆ-ಸಮಾರಂಭಗಳನ್ನು ಏರ್ಪಡಿಸಿ ವೇದಿಕೆ ಮೇಲೆ ಪಕ್ಷದ ಬಾವುಟ ಬ್ಯಾನರುಗಳನ್ನು ಬಳಸುವಂತಿಲ್ಲ.
🔸ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ / ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೊರುವಂತಿಲ್ಲ.
🔹ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ / ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು ಹಾಗೂ ಹಂಚುವುದನ್ನು ಮಾಡುವಂತಿಲ್ಲ.
🔸ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿವಿ ಮಾಧ್ಯಮಗಳು ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ.
ಈ ಮೇಲೆ ತಿಳಿಸಿರುವಂತೆ ಪ್ರಕರಣಗಳು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಉಲ್ಲಂಘನೆಯಾಗದಂತೆ ಚುನಾವಣೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಸಹಕರಿಸುವಂತೆ ಕೋರಲಾಗಿದೆ.