ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ.
ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ, ಉಜಿರೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ (17ವ) ದುರ್ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ಯಾಗಿದ್ದಾರೆ.
ಇಂದು ಮಧ್ಯಾಹ್ನ ನಂತರ ಕಾಲೇಜಿಗೆ ರಜೆ ಇದ್ದುದರಿಂದ ತನ್ನ ಸ್ನೇಹಿತರ ಜೊತೆ ಮಿತೃಬಾಗಿಲು ಗ್ರಾಮದ ಏಳೂವರೆ ಹಳ್ಳ ಎರ್ಮಾಯಿ ಫಾಲ್ಸ್ ಗೆ ಹೋಗಿ, ತೊಟ್ಟಾಯಿ ಗುಂಡಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಸಮಯ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.