ಶಿವಮೊಗ್ಗ : ರಾಜ್ಯದ ಅನೇಕ ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದ ಕೊರೋನಾ, ಇದೀಗ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಕಳೆದ ನಿನ್ನೆಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ನನ್ನ ಸಂಪರ್ಕದಲ್ಲಿರುವವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.