ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಎಲೆಕ್ಟ್ರಿಕ್ ಟಾಟಾ ಅಲ್ಟ್ರೋಜ್ ಕಾರು!

ಮುಂಬೈ: ದೇಶದಲ್ಲಿ ಅತ್ಯಂತ ಸುರಕ್ಷಿತ ಕಾರು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿರುವ ಟಾಟಾ ಮೋಟಾರ್ಸ್, ಅತ್ಯಾಕರ್ಷಕ ವಿನ್ಯಾಸ ಹಾಗೂ ತಂತ್ರಜ್ಞಾನ ಹೊಂದಿದೆ. ಟಾಟಾ ಮೋಟಾರ್ಸ್ ಈಗಾಗಲೇ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿ ಭಾರಿ ಸಂಚಲನ ಸೃಷ್ಟಿಸಿದೆ. ಇದೀಗ ಟಾಟಾ ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಜ್ಜಾಗಿದೆ. ನೂತನ ಕಾರಿನ ಮೈಲೇಜ್ ಸಂಪೂರ್ಣ ಚಾರ್ಜ್‌ಗೆ 500 ಕಿ.ಮೀ ಅನ್ನೋದು ಬಯಲಾಗಿದೆ.

ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರು ಘೋಷಣೆ ಮಾಡಿ  ವರ್ಷಗಳು ಉರುಳಿವೆ. ಆದರೆ ಕೊರೋನಾ ಸೇರಿದಂತೆ ಹಲವು ಸಮಸ್ಯೆಗಳಿಂದ ಟಾಟಾ ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರಿಗೆ ಬಿಡುಗಡೆ ಭಾಗ್ಯ ಸಿಗಲಿಲ್ಲ. ಇದೀಗ ಅಲ್ಟ್ರೋಜ್ ಬಿಡುಗಡೆಗ ಸಜ್ಜಾಗಿದೆ. ನೂತನ ಕಾರಿನ ಮೈಲೇಜ್ 500 ಕಿ.ಮೀ ಎಂದು ಹೇಳಲಾಗುತ್ತಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ 312 ಕಿ.ಮೀ. ಅಲ್ಟ್ರೋಜ್ ಬಿಡುಗಡೆಯಾಗುವ ವೇಳೆ ನೆಕ್ಸಾನ್ ಕಾರಿನ ಮೈಲೇಜ್ ಕೂಡ ಅಪ್‌ಗ್ರೇಡ್ ಮಾಡಲು ಟಾಟಾ ಮುಂದಾಗಿದೆ.  ಈ ಮೂಲಕ ಟಾಟಾ ಕಾರು ಕೂಡ ದುಬಾರಿ ಎಲೆಕ್ಟ್ರಿಕ್ ಕಾರುಗಳಂತೆ 500 ಕಿ.ಮೀ ಮೈಲೇಜ್ ನೀಡಲಿದೆ.

ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರಿನ ಬೆಲೆ 12 ಲಕ್ಷ ರೂಪಾಯಿಯಿಂದ ಆರಂಭಗೊಳ್ಳಲಿದೆ. ಕೇಂದ್ರ ಸರ್ಕಾರದ FEMA ಯೋಜನೆಯಡಿ ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆ 10 ಲಕ್ಷ ರೂಪಾಯಿ ಆಗಲಿದೆ. ಭಾರತದಲ್ಲಿ ಕಡಿಮೆ ಬೆಲೆ, ಗರಿಷ್ಠ ಮೈಲೇಜ್, ಗರಿಷ್ಠ ಸುರಕ್ಷತೆಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿ ಸಂಚಲನ ಸೃಷ್ಟಿಸಿದ್ದ ಟಾಟಾ ಇದೀಗ, ಅಲ್ಟ್ರೋಜ್ ಮೂಲಕ ದೇಶದ ಎಲೆಕ್ಟ್ರಿಕ್ ಮಾರುಕಟ್ಟೆ ಸಂಪೂರ್ಣ ಆಕ್ರಮಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು