ಯಾದಗಿರಿ: ಕೋವಿಡ್-19 ಸೋಂಕಿನಿಂದ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ (70) ಅವರು ನಿಧನರಾಗಿದ್ದಾರೆ.
ಕಫ, ನ್ಯುಮೋನಿಯಾ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಮದನಗೋಪಾಲ ನಾಯಕ ಇಂದು (ಸೋಮವಾರ) ಕಲಬುರಗಿಯ ಇಎಸ್‌ಐ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸುರಪುರದ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಸಗರ ನಾಡಿನ ಸಾಂಸ್ಕೃತಿಕ ರಾಯಭಾರಿ ಎಂದೇ ಬಿಂಬಿತರಾಗಿದ್ದ ರಾಜಾ ಮದನಗೋಪಾಲ ನಾಯಕ ಅವರಿಗೆ ಕಳೆದ ಐದು ದಿನಗಳ ಹಿಂದೆ ಕೊವಿಡ್ ಟೆಸ್ಟ್ ಮಾಡಿಸಿದ್ದಾಗ ಪಾಸಿಟಿವ್ ಎಂದು ದೃಢವಾಗಿದ್ದ ಹಿನ್ನೆಲೆಯಲ್ಲಿ ಕಲಬುರಗಿಯ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮರಣಹೊಂದಿದ್ದಾರೆ.
ವೀರಪ್ಪ ಮೊಯ್ಲಿ ಸಂಪುಟದಲ್ಲಿ ಸಚಿವ
1983ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪ್ರಥಮ ಬಾರಿಗೆ ಗೆಲುವು ಸಾಧಿಸಿದರು.
1985ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದರು.
ನಂತರ 1989ರಲ್ಲಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.