ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

ಗುರುವಾಯನಕೆರೆ, ಆ.14: ಎಕ್ಸೆಲ್ ಪದವಿ ಪೂರ್ವ ಕಾಲೇಜು, ಗುರುವಾಯನಕೆರೆಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಆಗಸ್ಟ್ 15 ಹಾಗೂ 16ರಂದು ಎರಡು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಶೈಕ್ಷಣಿಕ ಸಾಧಕರ ಅಭಿನಂದನೆ ಹಾಗೂ “ರಕ್ಷಕ ನಮನ-2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಆಗಸ್ಟ್ 15ರಂದು ಬೆಳಿಗ್ಗೆ 9.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಪೂರ್ವ ಸೇನಾ ವೈದ್ಯರು ಮೇ| ಡಾ| ಕುಶಾಂತ್ ಕೆ. ಎಸ್., ವಿಠಲ.ಎ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಂಟಿ ಕಾರ್ಯದರ್ಶಿ ಬೆಂಗಳೂರು ಭಾಗವಹಿಸಲಿದ್ದಾರೆ.

ನೀಟ್ ಜೆಇಇ ಮತ್ತು ಸಿಇಟಿ ಸಾಧಕರಿಗೆ ಅಭಿನಂದನಾ ಸಮಾರಂಭವೂ ಇದೇ ಸಂದರ್ಭದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ವಹಿಸಲಿದ್ದು, ಗೌರವ ಉಪಸ್ಥಿತರಾಗಿ ಡಾ. ಪ್ರಜ್ವಲ್ ಕೆಜೆ ಹಾಗೂ ಡಾ. ನವೀನ್ ಕುಮಾರ್ ಮರಿಕೆ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ “ಗೆಜೆ ಹೆಜ್ಜೆ – ನೃತ್ಯ ವೈಭವ” ಕಾರ್ಯಕ್ರಮ ನಡೆಯಲಿದೆ.

ಆಗಸ್ಟ್ 16ರಂದು ಬೆಳಿಗ್ಗೆ 9.30ಕ್ಕೆ ಭಾರತೀಯ ಸೇನೆ ಹಾಗೂ ಆಂತರಿಕ ಭದ್ರತಾ ವಿಭಾಗಗಳಲ್ಲಿ ರಾಷ್ಟ್ರಸೇವೆಗೈಯುವ ಎಕ್ಸೆಲ್‌ನ ವಿದ್ಯಾರ್ಥಿಗಳ ಪೋಷಕರಿಗೆ ಗೌರವ ಸಮರ್ಪಣೆ ನಡೆಯಲಿದೆ.

ಅಧ್ಯಕ್ಷತೆಯನ್ನು ಸುಮಂತ್ ಕುಮಾರ್ ಜೈನ್ ಬಿ. ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಮಾರ್ ಚಂದ್ರ ಉತ್ತರ ಕನ್ನಡ ಜಿಲ್ಲಾ ಲೋಕಾಯುಕ್ತ ಪೋಲೀಸ್ ಅಧೀಕ್ಷಕರು ಹಾಗೂ ಬೆಳ್ತಂಗಡಿ ಉಪಠಾಣಾಧಿಕಾರಿ ಸಿಕಂದರ್ ಪಾಷಾ ಭಾಗವಹಿಸಲಿದ್ದಾರೆ. ಗೌರವ ಉಪಸ್ಥಿತರಾಗಿ ಡಾ. ಪ್ರಜ್ವಲ್ ಕೆಜೆ ಮತ್ತು ಡಾ. ನವೀನ್ ಕುಮಾರ್ ಮರಿಕೆ ಉಪಸ್ಥಿತರಿರಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ “ನಾದತರಂಗ – ಸಂಗೀತ ಸಂಭ್ರಮ” ಕಾರ್ಯಕ್ರಮ ಜರುಗಲಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Spread the love
  • Related Posts

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಧರ್ಮಸ್ಥಳ: ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಕನಿಷ್ಠ ಒಂದು ಗಂಟೆಯಾದರೂ ನಾವು ಮನೆಯಲ್ಲಿ ಪರಿಶುದ್ಧ ತನು, ಮನ ಮತ್ತು ನಾಲಗೆಯಿಂದ ಶ್ರದ್ಧಾ-ಭಕ್ತಿಯಿಂದ ದೇವರ ಭಜನೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ಪೂಜ್ಯ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು ಸೋಮವಾರ…

    Spread the love

    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    ಹೊಸದಿಲ್ಲಿ: ವಾರದಲ್ಲಿ ಐದು ದಿನಗಳ ಕೆಲಸ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಪರಿಶೀಲಿಸುವುದಾಗಿ ಭಾರತೀಯ ಬ್ಯಾಂಕ್‌ಗಳ ಒಕ್ಕೂಟವು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್‌ಗಳು ಸೋಮವಾರದಿಂದ ನಡೆಸಲು ನಿರ್ಧರಿಸಿದ್ದ ಮೂರು ದಿನಗಳ ದೇಶವ್ಯಾಪಿ ಮುಷ್ಕರವನ್ನು ಮುಂದೂಡಿವೆ. ಸೋಮವಾರದಿಂದ ಮೂರು ದಿನ ಮುಷ್ಕರ…

    Spread the love

    You Missed

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    • By admin
    • September 28, 2026
    • 3 views
    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    • By admin
    • September 28, 2026
    • 3 views
    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    • By admin
    • September 27, 2026
    • 10 views
    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 11 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 10 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    • By admin
    • September 24, 2026
    • 10 views
    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ