ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಮತ್ತೊಂದು ಮಹತ್ತರವಾದ ಹೆಜ್ಜೆಯನ್ನಿಟ್ಟಿದೆ.

ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ.

ಪಿಯುಸಿಯಲ್ಲಿ ವಿಜ್ಞಾನ ವಿಭಾಗ ಸೇರಿ ಮುಂದೆ ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿಪರ ಕೋರ್ಸ್ ಗಳನ್ನು ಮಾಡಬೇಕೆಂದು ಬಯಸುವ ವಿದ್ಯಾರ್ಥಿಗಳಿಗೆ ಉಚಿತ ಫೌಂಡೇಶನ್ ಕೋರ್ಸ್‌ ನಡೆಸಲಿದೆ.ನೀಟ್, ಜೆಇಇ ಮೈನ್ಸ್ ಮತ್ತು ಅಡ್ವಾನ್ಸ್, ಸಿಇಟಿ, ನಾಟಾ ಎನ್ ಡಿ ಎ, ಬಿಎಸ್ಸಿ ಅಗ್ರಿ, ಫಾರೆನ್ಸಿಕ್ ಸೈನ್ಸ್ ಸೇರಿ ವಿಜ್ಞಾನ ವಿಭಾಗದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾರ್ಚ್‌ 10 ರಿಂದ ಪ್ರತಿ ನಿತ್ಯ ಉಚಿತ ಫೌಂಡೇಶನ್ ತರಗತಿಗಳು ನಡೆಯಲಿವೆ.

ಸಿಬಿಎಸ್ ಇ ಹಾಗೂ ಐಸಿಎಸ್‌ ಇ ತರಗತಿಗಳಿಗೆ ಈಗಾಗಲೇ ವಾರ್ಷಿಕ ಪರೀಕ್ಷೆ ಮುಗಿದಿರುವುದರಿಂದ ಮೊದಲ ಹಂತದಲ್ಲಿ ಸಿಬಿಎಸ್‌ ಇ ಹಾಗೂ ಐಸಿಎಸ್ ಈ ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗುತ್ತದೆ.ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಸ್ಟೇಟ್ ಬೋರ್ಡ್ ಸಿಲೆಬಸ್ ನ ವಿದ್ಯಾರ್ಥಿಗಳಿಗೆ ಕೂಡಾ ಉಚಿತ ಎಕ್ಸೆಲ್ ಕನೆಕ್ಟ್ ತರಗತಿ ಗಳನ್ನು ನಡೆಸಲಾಗುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿಶೇಷ ಜ್ಞಾನ ಹಾಗೂ ಪ್ರಾವೀಣ್ಯತೆಯಿರುವ, ಹಿರಿಯ ಪ್ರಾಧ್ಯಾಪಕರು ತರಗತಿ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಪ್ರತಿ ನಿತ್ಯ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ1 ಗಂಟೆಯವರೆಗೆ ತರಗತಿ ನಡೆಯಲಿದೆ. ಮಧ್ಯಾಹ್ನ ಕಾಲೇಜು ಆವರಣದಲ್ಲಿ ಎಕ್ಸೆಲ್ ಕನೆಕ್ಟ್ ತರಗತಿಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಊಟೋಪಚಾರ ವ್ಯವಸ್ಥೆ ಕಲ್ಪಿಸಲಾಗಿದೆ.

ತಾಲೂಕಿನ ಎಲ್ಲಾ ಭಾಗದಿಂದಲೂ ಈ ವಿದ್ಯಾರ್ಥಿಗಳಿಗಾಗಿ ಉಚಿತ ಬಸ್ ವ್ಯವಸ್ಥೆಯನ್ನು ಕೂಡಾ ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ ಕಾಲೇಜು ಕಛೇರಿ 8867242769/ 9880899769 ಸಂಪರ್ಕಿಸಬಹುದು.

Spread the love
  • Related Posts

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

    Spread the love

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    ಮರೋಡಿ : ಮಾ 07 ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಾ 07 ರಂದು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿಮಾಜಿ…

    Spread the love

    You Missed

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 14 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 20 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 50 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 79 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 35 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 21 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ