ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುತ್ತಿರುವ ಎಕ್ಸೆಲ್ ಪಿ.ಯು ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿನ ವಿಜ್ಞಾನ ವಿಭಾಗ ಶೇಕಡಾ 100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದ ಅಕ್ಷಯ್ 595 ಅಂಕ ಗಳಿಸಿದ್ರೆ, ಶಿಲ್ಪಿತಾ ಎಚ್ ಎಸ್ ಮತ್ತು ರೋಹಿತ್ ಆರ್ ಎಂ 594 ಗಳಿಸಿದ್ದಾರೆ. ಜೊತೆಗೆ ಕಾಲೇಜಿನ 15ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ.










