ಗುರುವಾಯನಕೆರೆ: ಪಿಯು ಶಿಕ್ಷಣ ಹಾಗೂ ನೀಟ್, ಜೆಇಇ, ಸಿಇಟಿ, ಎನ್ ಡಿ ಎ, ನಾಟಾ, ಬಿಎಸ್ಸಿ ಅಗ್ರಿ, ವಾಣಿಜ್ಯ ವಿಭಾಗದಲ್ಲಿ ಸಿಎ,ಸಿ ಎಸ್, ಕ್ಲಾಟ್ ಮೊದಲಾದ ಪರೀಕ್ಷೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಕಳೆದ ಬಾರಿಯಂತೆ, ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಅರ್ಜಿ ಆಹ್ವಾನಿಸುತ್ತಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯ ಪಠ್ಯ ಕ್ರಮದ ಒಂಬತ್ತನೆಯ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 98 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದವರು ಹಾಗೂ ಸಿ ಬಿ ಎಸ್ ಇ/ಐ ಸಿ ಎಸ್ ಇ ಯ ವಿದ್ಯಾರ್ಥಿಗಳು ಶೇಕಡಾ 95 ಮತ್ತು ಹೆಚ್ಚುಅಂಕ ಪಡೆದವರು ಈ ಯೋಜನೆಗೆ ಅರ್ಹರು. ಹತ್ತನೇ ತರಗತಿಯ ಮಧ್ಯಾವಧಿ ಪರೀಕ್ಷೆಯಲ್ಲಿ ಕ್ರಮವಾಗಿ 98 ಶೇಕಡಾ ಹಾಗೂ 95 ಶೇಕಡಾಕ್ಕಿಂತ ಅಧಿಕ ಪಡೆದವರಿಗೆ ಕೂಡಾ ಈ ಯೋಜನೆಯಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ.
ಎಕ್ಸೆಲ್ ಬೆಳಕು ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಪದವಿ ಪೂರ್ವ ಶಿಕ್ಷಣ ಹಾಗೂ ಅವರ ಆಯ್ಕೆಯ ಕೋಚಿಂಗ್ ನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅಥವಾ ಪಾಲಕರು ಕಾಲೇಜು ಕಚೇರಿಗೆ ನೇರವಾಗಿ ಭೇಟಿ ನೀಡಬಹುದು. ಅಥವಾ +918867242769 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.





