ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

ಎಕ್ಸೆಲ್ ಕಾಲೇಜು ಮಾನ್ಯತೆ ರದ್ದಾಗಿಲ್ಲ; ಪ್ರಸಾರವಾಗುತ್ತಿರುವ ಸುದ್ದಿ ದಾರಿ ತಪ್ಪಿಸುವಂತದ್ದು

ಬೆಳ್ತಂಗಡಿ: ಇತ್ತೀಚೆಗೆ ಕೆಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದಾಗಿದೆ ಎಂಬ ಸುದ್ದಿ ಪ್ರಸಾರವಾಗುತ್ತಿದ್ದು, ಈ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು – ವಿದ್ಯಾರ್ಥಿಗಳ ದಾಖಲಾತಿ ಕೋಡ್ SS0351 ರಲ್ಲೇ”.

ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜು ಕೋಡ್ SS0351 ರ ಅಡಿಯಲ್ಲಿ ದಾಖಲಾತಿ ಮಾಡಲಾಗಿದೆ. ಈ ಕಾಲೇಜು ಕೋಡ್‌ನ ಮಾನ್ಯತೆ ಹಾಗೂ ವಿದ್ಯಾರ್ಥಿಗಳ ದಾಖಲಾತಿ ವಿವರಗಳನ್ನು ವಿದ್ಯಾರ್ಥಿಗಳ SATS ಸಂಖ್ಯೆಯ ಮೂಲಕ ಹತ್ತಿರದ ಡಿಡಿಪಿಯು ಕಚೇರಿ ಅಥವಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಬಹುದು.

ಮಾನ್ಯತೆ ರದ್ದಾದುದು SS0376 ಕೋಡ್ ಮಾತ್ರ, ಕಾಲೇಜು ಅಲ್ಲ , ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಇಲ್ಲ

ಪ್ರಸ್ತುತ ಮಾನ್ಯತೆ ರದ್ದುಗೊಂಡಿರುವುದು ಕಾಲೇಜು ಕೋಡ್ SS0376 ಆಗಿದೆ. ಕಳೆದ ವರ್ಷ ಈ ಕೋಡ್‌ಗೆ ಮಾನ್ಯತೆ ಪಡೆಯಲು ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಕೋಡ್ ಅಡಿಯಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಲಾಗಿಲ್ಲ. ಅಲ್ಲದೆ, ಈ ವರ್ಷದ ಮಾರ್ಚ್ ತಿಂಗಳ ಕೊನೆಯಲ್ಲಿಯೇ ಈ ಕೋಡ್‌ನ ಮಾನ್ಯತೆಯನ್ನು ರದ್ದುಗೊಳಿಸುವಂತೆ ಸಂಸ್ಥೆಯೇ ಅರ್ಜಿ ಸಲ್ಲಿಸಿತ್ತು.

ಆದಾಗ್ಯೂ, ಕೆಲವು ದುರುದ್ದೇಶಪೂರಿತ ವ್ಯಕ್ತಿಗಳು ಸಂಸ್ಥೆಯ ಘನತೆ ಹಾಗೂ ವಿಶ್ವಾಸಾರ್ಹತೆಯನ್ನು ಹಾಳು ಮಾಡುವ ಉದ್ದೇಶದಿಂದ “ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು” ಎಂಬ ತಪ್ಪು ಮತ್ತು ಸುಳ್ಳು ಮಾಹಿತಿಯನ್ನು ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುತ್ತಿದ್ದಾರೆ.

ಆದ್ದರಿಂದ ವಿದ್ಯಾರ್ಥಿಗಳು, ಪೋಷಕರು, ಪತ್ರಿಕಾ ಬಂಧುಗಳು ಹಾಗೂ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮೂಲಗಳಿಂದ ಮಾಹಿತಿಯನ್ನು ಪರಿಶೀಲಿಸಿ ಸಹಕರಿಸುವಂತೆ ಕಾಲೇಜು ಆಡಳಿತ ಮಂಡಳಿ ವಿನಂತಿಸಿದೆ.

ಹಾಗೂ ಸುಖಾಸುಮ್ಮನೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ

– ಕಾಲೇಜು ಆಡಳಿತ ಮಂಡಳಿ
ಎಕ್ಸೆಲ್ ಕಾಲೇಜು, ಗುರುವಾಯನಕೆರೆ

Spread the love
  • Related Posts

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    ಧರ್ಮಸ್ಥಳ : ( ಆಗಸ್ಟ್ 14) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2 ,ಶಾಲೆಯಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಕೆ .ನಂದ ಇವರು ತುಳು…

    Spread the love

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 7 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 16 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ