ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಸಕಲೇಶಪುರ ವತಿಯಿಂದ ತಾಲೂಕಿನ ಶುಕ್ರವಾರಸಂತೆ ವಲಯದ ಯಡವರನಹಳ್ಳಿ (ನಲ್ಲುಳ್ಳಿ) ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, “ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಸೇವಾ ಸಂಸ್ಥೆಯಲ್ಲ, ಮಾನವೀಯ ಮೌಲ್ಯಗಳನ್ನು ಬೆಳೆಸುವ ಪುಣ್ಯ ಕ್ಷೇತ್ರವಾಗಿದೆ. ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವ ಮೂಲಕ ಅಂತರಂಗದ ಕಣ್ಣುಗಳನ್ನು ತೆರೆಯಬೇಕು. ದೇಹದ ಕಣ್ಣಿನ ಆರೋಗ್ಯ ಎಷ್ಟು ಮುಖ್ಯವೋ, ಸಮಾಜದ ನೋವು-ನಲಿವುಗಳನ್ನು ಅರಿಯುವ ಅಂತರಂಗದ ದೃಷ್ಟಿಯೂ ಅಷ್ಟೇ ಮುಖ್ಯವಾಗಿದೆ. ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರಗಳಂತಹ ಸೇವಾ ಕಾರ್ಯಕ್ರಮಗಳು ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದರ ಜೊತೆಗೆ ಪರಸ್ಪರ ಸಹಕಾರ ಮತ್ತು ಮಾನವೀಯತೆಯ ಮೌಲ್ಯಗಳನ್ನು ಬೆಳೆಸುತ್ತವೆ. ಇಂತಹ ಕಾರ್ಯಕ್ರಮಗಳ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು” ಎಂದು ಕರೆ ನೀಡಿದರು.

ಅಲ್ಲದೆ, “ಕಣ್ಣುಗಳು ನಮ್ಮ ಜೀವನದ ಅಮೂಲ್ಯ ಅಂಗವಾಗಿದ್ದು, ಅವುಗಳ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಹೆಚ್ಚಿನ ಕಾಳಜಿ ವಹಿಸಬೇಕು. ಇಂದಿನ ಜೀವನಶೈಲಿ, ಮೊಬೈಲ್ ಹಾಗೂ ಕಂಪ್ಯೂಟರ್ ಬಳಕೆಯಿಂದ ಕಣ್ಣಿನ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ನಿಯಮಿತವಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಗತ್ಯ. ಆರಂಭಿಕ ಹಂತದಲ್ಲೇ ಸಮಸ್ಯೆಗಳನ್ನು ಗುರುತಿಸಿದರೆ ದೃಷ್ಟಿಹಾನಿಯನ್ನು ತಡೆಗಟ್ಟಬಹುದು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಮ್ಮ ಐ ಕೇರ್ ಆಸ್ಪತ್ರೆಯ ಸಹಯೋಗದಲ್ಲಿ ಗ್ರಾಮೀಣ ಜನರಿಗೆ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆಯ ಸೌಲಭ್ಯ ಒದಗಿಸಲಾಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ” ಎಂದು ಹೇಳಿದರು.

ಶಿಬಿರದಲ್ಲಿ ಡಾ. ವಾಸುದೇವ, ಯೋಜನಾಧಿಕಾರಿ ರಾಜೇಶ್ ಎಂ., ಅಮ್ಮ ಐ ಕೇರ್ ಆಸ್ಪತ್ರೆಯ ಸಿಬ್ಬಂದಿಗಳಾದ ಅಶ್ವಿನಿ, ಮೊಹಮ್ಮದ್ ಹಾಗೂ ರುದ್ರೇಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಮಂಜುಳಾ, ಮೇಲ್ವಿಚಾರಕರಾದ ಗೌತಮ್, ಸೇವಾಪ್ರತಿನಿಧಿ ಅಂಬಿಕಾ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಉಚಿತ ರಕ್ತದೊತ್ತಡ (ಬಿಪಿ) ಪರೀಕ್ಷೆ, ರಕ್ತದಲ್ಲಿನ ಸಕ್ಕರೆ ಪ್ರಮಾಣ ಪರೀಕ್ಷೆ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ನಡೆಸಲಾಯಿತು.

ಶಿಬಿರದಲ್ಲಿ 10 ಜನ ಸದಸ್ಯರಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಗಿದ್ದು, 7 ಜನ ಫಲಾನುಭವಿಗಳನ್ನು ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೇವೆಯನ್ನು ತಲುಪಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಈ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ