ಕೋವಿಡ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 12 ಕರೊನಾ ರೋಗಿಗಳ ದುರ್ಮರಣ

ಬರುಚ್​: ಶನಿವಾರ ನಸುಕಿನ ಜಾವದಲ್ಲಿ ಉಂಟಾದ ಅಗ್ನಿ ಅವಘಡದಲ್ಲಿ ಸುಮಾರು 12 ಮಂದಿ ಕರೊನಾ ರೋಗಿಗಳು ಮೃತಪಟ್ಟಿರುವ ಘಟನೆ ಗುಜರಾತ್​ನ ಬರುಚ್​ನಲ್ಲಿರುವ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ಸುಮಾರು 50 ಇತರೆ ರೋಗಿಗಳು ವೆಲ್​ಫೇರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಲ್ಲರನ್ನು ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರ.

ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಮತ್ತು ಹೊಗೆಯಿಂದಾಗಿ ಉಸಿರಾಡಲು ಆಗದೇ 12 ಕರೊನಾ ರೋಗಿಗಳು ಸಾವಿಗೀಡಾಗಿದ್ದಾರೆ ಎಂದು ಬರುಚ್​ ಪೊಲೀಸ್​ ವರಿಷ್ಠಾಧಿಕಾರಿ ರಾಜೇಂದ್ರಸಿನ್ಹ್​ ಚುದಾಸಮಾ ಹೇಳಿದ್ದಾರೆ.

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಆತಂಕವನ್ನು ಚುದಾಸಮಾ ವ್ಯಕ್ತಪಡಿಸಿದ್ದಾರೆ.

ಬರುಚ್​-ಜಂಬುಸರ್​ ಹೆದ್ದಾರಿ ಬಳಿಯಿದ್ದ ನಾಲ್ಕು ಅಂತಸ್ತಿನ ಕಟ್ಟಡವನ್ನು ಕೋವಿಡ್​ 19 ಆಸ್ಪತ್ರೆಯಾಗಿ ಮಾಡಲಾಗಿತ್ತು, ಇದನ್ನು ಟ್ರಸ್ಟ್​ ಒಂದು ನಡೆಸುತ್ತಿತ್ತು.

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನೆಲಮಹಡಿಯಲ್ಲಿರುವ ಕೋವಿಡ್​ ವಾರ್ಡ್​ನಲ್ಲಿ ಬೆಂಕಿ ಹೊತ್ತಿಕೊಂಡಿತು ಎಂದು ಅಗ್ನಿಶಾಮಕ ಅಧಿಕಾರಿ ಶೈಲೇಶ್​ ಸಾನ್ಸಿಯಾ ಹೇಳಿದ್ದಾರೆ.

ಒಂದು ಗಂಟೆಯೊಳಗೆ ಬೆಂಕಿಯನ್ನು ತಹಬದಿಗೆ ತಂದು 50 ರೋಗಿಗಳನ್ನು ರಕ್ಷಣೆ ಮಾಡಲಾಯಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ