ವಿಶಾಖಪಟ್ಟಣಂ: ಕೋವಿಡ್ ಕೇರ್ ಸೆಂಟರ್ ಆಗಿದ್ದ ವಿಜಯವಾಡದ ಹೋಟೆಲ್ವೊಂದರಲ್ಲಿ ಅಗ್ನಿ ಅವಗಢ ಸಂಭವಿಸಿ 7 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ.
ಅನೇಕ ಮಂದಿ ಹೋಟೆಲ್ನಲ್ಲಿಯೇ ಸಿಲುಕಿರುವ ಮಾಹಿತಿ ಇದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅನೇಕ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ