ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಹುದ್ದೆಗಳ ವಿವರಗಳು:

READ ALSO

▪️ಅಗ್ನಿಶಾಮಕ ಠಾಣಾಧಿಕಾರಿ 36
▪️ಅಗ್ನಿಶಾಮಕ ಹುದ್ದೆಗಳು 1222
▪️ಅಗ್ನಿಶಾಮಕ ಚಾಲಕರ ಹುದ್ದೆಗಳು 227
▪️ಚಾಲಕ ತಂತ್ರಜ್ಞರ ಹುದ್ದೆಗಳು 82

ಒಟ್ಟು ಹುದ್ದೆಗಳ ಸಂಖ್ಯೆ 1567

ವಿದ್ಯಾರ್ಹತೆ

▪️ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗೆ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ಪದವಿ ಹೊಂದಿದ್ದು, ರಾಸಾಯನಶಾಸ್ತ್ರವನ್ನು ಒಂದು ವಿಷಯವನ್ನಾಗಿ ಅಧ್ಯಯನ ಮಾಡಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪದವಿ ಪಾಸ್‌ ಮಾಡಿರಬೇಕು. ▪️ಅಗ್ನಿಶಾಮಕ ಮತ್ತು ಅಗ್ನಿಶಾಮಕ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ ಅಥವಾ ತತ್ಸಮಾನ, ಚಾಲಕ ತಂತ್ರಜ್ಞರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಆಟೋಮೊಬೈಲ್‌ ವಿಭಾಗದಲ್ಲಿ ಐಟಿಐ ವಿದ್ಯಾರ್ಹತೆ ಪಾಸ್‌ ಮಾಡಿರಬೇಕು.

ಅರ್ಜಿ ಶುಲ್ಕ ಪಾವತಿ ವಿಧಾನ:

ಅರ್ಜಿ ಶುಲ್ಕವನ್ನು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಅಧಿಕೃತ ಶಾಖೆಗಳಲ್ಲಿ ಬ್ಯಾಂಕಿನ ಕಛೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬೇಕು.

ಅರ್ಜಿಯನ್ನು ದಿನಾಂಕ 22-06-2020 ಬೆಳಿಗ್ಗೆ 10-00 ಗಂಟೆಯಿಂದ 20-07-2020 ರ ಸಂಜೆ 06-00 ಗಂಟೆವರೆಗೆ ಸಲ್ಲಿಸಬಹುದು. ಬ್ಯಾಂಕ್‌ ಶುಲ್ಕವನ್ನು ದಿನಾಂಕ 22-07-2020 ರ ವರೆಗೆ ಪಾವತಿಸಲು ಅವಕಾಶ ನೀಡಲಾಗಿದೆ.

ವಯೋಮಿತಿ ಮತ್ತು ಅರ್ಹತೆಗಳು:

ಅರ್ಜಿಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 20-07-2020 ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. sc / st ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ನೇಮಕಾತಿ ವಿಧಾನ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೇಹದಾರ್ಡ್ಯತೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ, ಇವುಗಳಲ್ಲಿ ಅರ್ಹತೆ ಪಡೆದವರಿಗೆ ಲಿಖಿತ ಪರೀಕ್ಷೆಯನ್ನು ಏಕಕಾಲದಲ್ಲಿ ಬೆಂಗಳೂರಿನ ಆಯ್ದ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇರೆಗೆ ಹುದ್ದೆಗಳ ವರ್ಗೀಕರಣಕ್ಕೆ ಅನುಗುಣವಾಗಿ ಒಂದು ಹುದ್ದೆಗೆ ಮೂರು ಅಭ್ಯರ್ಥಿಗಳನ್ನು ಮೌಖಿಕ ಪರೀಕ್ಷೆ 1:3 ಅನುಪಾತದಲ್ಲಿ ಕರೆಯಲಾಗುತ್ತದೆ. ಈ ಮೌಖಿಕ ಪರೀಕ್ಷೆ 10 ಅಂಕ ಹೊಂದಿರುತ್ತದೆ.

ಲಿಖಿತ ಪರೀಕ್ಷೆ ಮೌಖಿಕ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಕ್ರೋಢೀಕರಿಸಿ ಅಂತಿಮ ತಾತ್ಕಾಲಿಕ ಆಯ್ಕೆಪಟ್ಟಿಯನ್ನು 1:1 ಅನುಪಾತದಲ್ಲಿ ಪ್ರಕಟಿಸಲಾಗುತ್ತದೆ. ನಂತರ ಈ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ, ಮೂಲ ದಾಖಲೆಗಳ ಪರೀಕ್ಷೆ ನಡೆಸಿ, ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ.

ಉದ್ಯೋಗದ ವಿವರ:

ಹುದ್ದೆಯ ಹೆಸರು: ಠಾಣಾಧಿಕಾರಿ, ಚಾಲಕ, ಅಗ್ನಿಶಾಮಕ, ಟೆಕ್ನೀಷಿಯನ್‌

ಹೆಚ್ಚಿನ ವಿವರಗಳಿಗೆ ಇಲಾಖೆಯ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ಗೆ ಭೇಟಿ ನೀಡಿ.