ಕಾಡಾನೆಗೆ ಬೆಂಕಿ ಹಚ್ಚಿ ಹತ್ಯೆಗೈದ ಕಿರಾತಕರು! ಪ್ರಾಣಬಿಟ್ಟ ಆನೆಯ ಬಿಗಿದಪ್ಪಿಕೊಂಡು ಕಣ್ಣೀರಿಟ್ಟ ಅರಣ್ಯ ಸಿಬ್ಬಂದಿ!

ತಮಿಳುನಾಡು: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮಾಸಿನಗುಡಿಯಲ್ಲಿ ಅತ್ಯಂತ ಕ್ರೂರವಾಗಿ ಆನೆಯನ್ನು ಕೊಲ್ಲಲಾಗಿದೆ. ಕಾಡಿನಿಂದ ನಾಡಿಗೆ ಆಹಾರ ಹುಡುಕಿಕೊಂಡು ಬಂದ ಒಂಟಿ ಸಲಗವೊಂದಕ್ಕೆ ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ವರದಿಯಾಗಿದೆ.

https://youtu.be/LQC-RmohkXc

ಮಾಸಿನಗುಡಿಯಲ್ಲಿನ ರೆಸಾರ್ಟ್ ಬಳಿ ಆನೆಯೊಂದು ಆಹಾರ ಹುಡುಕುತ್ತಾ ಬಂದಿದೆ. ರಾತ್ರಿ ವೇಳೆ ಬಂದ ಆನೆಗೆ ಇಲ್ಲಿನ ಮೂವರ ಗುಂಪು ಚಿತ್ರ ಹಿಂಸೆ ನೀಡಿದೆ.

ಬೆಂಕಿ ನಂದಿಸಲು ಆನೆ ಹರಸಾಹಸಪಟ್ಟಿದೆ. ಮರಗಳಿಗೆ ದೇಹವನ್ನು ಉಜ್ಜತೊಡಗಿದೆ. ಮೊದಲೆ ಬೆಂಕಿ ತಗುಲಿದ ಕಾರಣ ಆನೆಯ ಚರ್ಮ ಬೆಂದು ಹೋಗಿದೆ. ಇತ್ತ ಮರಗಳಿಗೆ ಉಜ್ಜಿದ ಕಾರಣ ಚರ್ಮ ಕಿತ್ತು ಹೋಗಿದೆ. ಕೆಲ ದಿನಗಳ ಬಳಿಕ ಅರಣ್ಯ ಸಿಬ್ಬಂದಿ 40 ವರ್ಷ ಆನೆ ಜಲಾಶಯದ ಸಮೀಪ ಬಿದ್ದಿರುವುದು ಕಣ್ಣಗೆ ಬಿದ್ದಿದೆ. ತಕ್ಷಣವೇ ಆನೆಯನ್ನು ರಕ್ಷಿಸಲು ಧಾವಿಸಿದ್ದಾರೆ.

ನೋವಿನಿಂದ ನರಳಿದ ಆನೆ ಪ್ರಾಣಬಿಟ್ಟಿದೆ. ಚರ್ಮ ಬೆಂದು ಹಾಗೂ ಕಿತ್ತು ಹೋದ ಕಾರಣ ಸೆಪ್ಟಿಕ್ ಆಗಿದೆ. ಇನ್ನು ಚರ್ಮ ಕೊಳೆಯಲು ಆರಂಭಿಸಿದೆ. ಆಹಾರ ಸೇವಿಸಲು ಸಾಧ್ಯವಾಗದೆ, ನೀರು ಸೇವಿಸದ ಆನೆ ನರಕ ವೇದನೆಯಿಂದ ಪ್ರಾಣ ಬಿಟ್ಟಿದೆ.

ಈ ಬಗ್ಗೆ ತಕ್ಷಣವೇ ಅರಣ್ಯ ಇಲಾಖೆ ತನಿಖೆ ಆರಂಭಿಸಿದ್ದು ಈ ಕುರಿತ ವಿಡಿಯೋ ಪಡೆದ ಇಲಾಖೆಯು ಪ್ರಶಾಂತ್ ಹಾಗೂ ರೇಮಂಡ್ ಡೀನ್ ಎಂಬ ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ. ಮತ್ತೊರ್ವ ಆರೋಪಿ ರಿಕ್ಕಿ ರಿಯಾನ್ ಕೂಡ ಈ ಕ್ರೂರ ಘಟನೆಯಲ್ಲಿ ಪಾಲು ಹೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಾಣ ಬಿಟ್ಟ ಆನೆಯನ್ನು ಕೊಂಡೊಯ್ಯುವ ವೇಳೆ ಅರಣ್ಯ ಸಿಬ್ಬಂದಿ ಕಣ್ಣೀರಿಟ್ಟ ವಿಡಿಯೋ ಮತ್ತಷ್ಟು ನೋವುಂಟು ಮಾಡುತ್ತಿದೆ. ಆನೆ ಸೊಂಡಿಲ ಹಿಡಿದು ಅರಣ್ಯ ಸಿಬ್ಬಂದಿ ಅತ್ತಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಸಾಮಾಜಿಕ ಜಾಲತಾಣಲ್ಲಿ ಆಗ್ರಹಿಸಿದ್ದಾರೆ. ಇಷ್ಟೇ ಅಲ್ಲ ಕಾಡುಪ್ರಾಣಿಗಳ ಮೇಲಿನ ಕ್ರೌರ್ಯಕ್ಕೆ ಅಂತ್ಯಕಾಣಿಸಲು ಕಠಿಣ ಕಾನೂನಿನ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 57 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 97 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 42 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 609 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ