ಗೌಪ್ಯತೆ ನೀತಿ: ಫೇಸ್‌ಬುಕ್ ಮತ್ತು ವಾಟ್ಸಾಪ್‌ಗೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್!

ನವದೆಹಲಿ: ವಾಟ್ಸಾಪ್‌ನ ಇತ್ತೀಚಿನ ಗೌಪ್ಯತೆ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಮನವಿಯ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸೋಮವಾರ ಫೇಸ್‌ಬುಕ್ ಮತ್ತು ವಾಟ್ಸಾಪ್‌ಗೆ ನೋಟಿಸ್ ಜಾರಿಗೊಳಿಸಿದೆ.

ಬಳಕೆದಾರರ ಡೇಟಾವನ್ನು ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಜನರ ಗೌಪ್ಯತೆಯನ್ನು ಕಾಪಾಡಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್. ‌ಎ. ಬೊಬ್ಡೆ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

“ವಾಟ್ಸಾಪ್‌ನಿಂದ ಸಂದೇಶಗಳ ಸರ್ಕ್ಯೂಟ್ ಬಹಿರಂಗಗೊಳ್ಳುತ್ತದೆ ಎಂಬ ಆತಂಕವಿದೆ” ಎಂದು ನ್ಯಾಯಪೀಠ ಹೇಳಿದೆ, ನಾಗರಿಕರು ತಮ್ಮ ಗೌಪ್ಯತೆಯನ್ನು ಕಳೆದುಕೊಳ್ಳುವ ಬಗ್ಗೆ ಹೆಚ್ಚಿನ ಆತಂಕವನ್ನು ಹೊಂದಿದ್ದಾರೆ ಮತ್ತು ಅವರ ಡೇಟಾ ಮತ್ತು ಚಾಟ್‌ಗಳನ್ನು ಇತರರೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂದು ಅವರು ಭಾವಿಸುತ್ತಿದ್ದಾರೆ ಎಂದಿದೆ.

“ವಾಟ್ಸಾಪ್ ಮತ್ತು ಫೇಸ್‌ಬುಕ್ ಎರಡು ಅಥವಾ ಮೂರು ಟ್ರಿಲಿಯನ್ ಡಾಲರ್ ಕಂಪೆನಿಗಳಾಗಿರಬಹುದು ಆದರೆ ಜನರು ತಮ್ಮ ಗೌಪ್ಯತೆಯನ್ನು ಹಣಕ್ಕಿಂತ ಹೆಚ್ಚು ಗೌರವಿಸುತ್ತಾರೆ. ಅವರ ಗೌಪ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯ” ಎಂದು ಫೇಸ್‌ಬುಕ್ ಮತ್ತು ವಾಟ್ಸಾಪ್‌ ಅನ್ನು ಪ್ರತಿನಿಧಿಸಿ ಹಾಜರಾದ ಸಲಹೆಗಾರರಿಗೆ ನ್ಯಾಯಪೀಠ ತಿಳಿಸಿದೆ.

ವಿಚಾರಣೆಯ ಸಮಯದಲ್ಲಿ, ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅರವಿಂದ ದತಾರ್ ಕ್ರಮವಾಗಿ ವಾಟ್ಸಾಪ್ ಮತ್ತು ಫೇಸ್‌ಬುಕ್‌ ಪರವಾಗಿ ಹಾಜರಾಗಿದ್ದು ಆರೋಪಗಳನ್ನು ನಿರಾಕರಿಸಿದರು ಮತ್ತು ಇದನ್ನು “ತಪ್ಪು ಮಾಹಿತಿ” ಎಂದು ಕರೆದರು. ಅರ್ಜಿದಾರ ಇಂಟರ್ನೆಟ್ ಫ್ರೀಡಮ್ ಫೌಂಡೇಶನ್ ಪರ ಹಾಜರಾದ ಹಿರಿಯ ವಕೀಲ ಶ್ಯಾಮ್ ದಿವಾನ್, ಹೆಚ್ಚಿನ ಪ್ರಮಾಣದ ಮೆಟಾಡೇಟಾವನ್ನು ಲಾಭಕ್ಕಾಗಿ ಹಂಚಿಕೊಳ್ಳಲಾಗಿದೆ ಮತ್ತು ಇದು ಗೌಪ್ಯತಾ ಕಳವಳವಾಗಿದೆ ಎಂದಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 151 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 64 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ