ಬೆಂಗಳೂರು: ನಾಳೆ ನಡೆಯಬೇಕಾಗಿದ್ದ FDA ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ್ಯಾಂತ ನಾಳೆ FDA 1114 ಹುದ್ದೆಗಳಿಗೆ ಪರೀಕ್ಷೆ ನಡೆಯಬೇಕಾಗಿದ್ದು 3.74ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆ ನಾಳೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿದೆ.
ಈ ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಮುಖ ಆರೋಪಿಗಳನ್ನು ಸಿ.ಸಿ.ಬಿ ಪೋಲಿಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಚಪ್ಪ, ಚಂದ್ರ ಸೇರಿದಂತೆ 6 ಮಂದಿಯನ್ನು ಬಂಧಿಸಿದ್ದು ಬಂಧಿತರಿಂದ 24ಲಕ್ಷ, ಹಾಗೂ 3 ವಾಹನ ವಶಪಡಿಸಿಕೊಳ್ಳಲಾಗಿದೆ.