ಮಧ್ಯರಾತ್ರಿ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಅಧಿಕಾರಿಗಳಿಗೆ ಬಿಗ್ ಶಾಕ್! ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲು ನ್ಯಾಯಾಲಯದ ಸೂಚನೆ

ಪುತ್ತೂರು: ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಕಡಬದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ತಾರ್ಕಿಕ ಅಂತ್ಯ ಕಂಡಿದ್ದು, ದೌರ್ಜನ್ಯ ಎಸಗಿದ ಅರಣ್ಯ ಅಧಿಕಾರಿಗಳ ಮತ್ತು ಪೋಲೀಸರ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಸುಬ್ರಹ್ಮಣ್ಯ ವಲಯದ ಐತ್ತೂರು ರಕ್ಷಿತಾರಣ್ಯದಿಂದ ಬೆಳೆ ಬಾಳುವ ಮರಗಳು ಲೂಟಿಯಾಗುತ್ತಿದೆ ಎಂದು ದೂರು ನೀಡಿದ ಐತ್ತೂರು ಗ್ರಾಮದ ಮೂಜೂರು ನಿವಾಸಿ ಪ್ರಸಾದ್ ಎಂಬವರ ಮನೆಗೆ ಅರಣ್ಯಾಧಿಕಾರಿಗಳು ನಡುರಾತ್ರಿ ದಾಳಿ ನೆಪದಲ್ಲಿ ದಾಂಧಲೆ ನಡೆಸಿ ದ್ವೇಷ ಸಾಧನೆ ಮಾಡಿದ್ದಾರೆ ಎಂದು ಹೇಳಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯಾಧಿಕಾರಿಗಳು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಅಗ್ರಹಿಸಿ ದೂರುದಾರ ಮನೆಯವರು ಹಾಗೂ ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್ ರ ತಂಡ ನಡೆಸುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಈ ಮೂಲಕ ಉತ್ತಮ ಫಲ ಸಿಕ್ಕಂತಾಗಿದೆ.

READ ALSO

ಮಧ್ಯರಾತ್ರಿ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರವಾಗಿ ಪೊಲೀಸ್ ಇಲಾಖೆ ಮೃದು ಧೋರಣೆ ತೋರಿಸುತ್ತಿರುವ ಬಗ್ಗೆ ಸೀತಮ್ಮ ಎಂಬವರು ಪುತ್ತೂರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ದೌರ್ಜ್ಯನ್ಯ ಎಸಗಿದ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಬೇಕೆಂದು ಆದೇಶ ಹೊರಡಿಸಿದೆ.