ಕಾಡಾನೆಗಳ ದಾಳಿ ಪ್ರಕರಣದಲ್ಲಿ ಪುಂಡಾಟ ನಡೆಸಿದ ಆರೋಪದಲ್ಲಿ 7ಜನರ ಬಂಧನ

ಕಡಬ: ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಫೆ.23ರಂದು ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವು ಜನರು ಸ್ಥಳಕ್ಕೆ ಬಂದು ಕಾಡಾನೆ ತುಂಬಿಸಿದ ಲಾರಿಯನ್ನು ತಡೆದು ನಿಲ್ಲಿಸಿ ಹಿಡಿದಿರುವ ಆನೆಯನ್ನು ಇಲ್ಲಿಯೇ ನಿಲ್ಲಿಸಿ, ಇತರ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ಎಲ್ಲಾ ಆನೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಗಲಾಟೆ ನಡೆಸಿದ್ದರು.

ಇನ್ನು ಕಾಡಾನೆಯನ್ನು ಹೆಚ್ಚು ಸಮಯ ಲಾರಿಯಲ್ಲಿ ನಿಲ್ಲಿಸಲು ಆಗುವುದಿಲ್ಲ. ಆದ ಕಾರಣ ನಾವು ಮೊದಲು ಸೆರೆಹಿಡಿದ ಆನೆಯನ್ನು ಬಿಟ್ಟು ಬಂದು ಉಳಿದ ಕಾಡಾನೆಗಳನ್ನು ಸೆರೆಹಿಡಿಯುವುದಾಗಿ ಹೇಳಿದರೂ ಕೇಳದ ಆರೋಪಿಗಳು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ.

ಗಲಾಟೆಯಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಜನರಿಗೆ ತಿಳುವಳಿಕೆ ಹೇಳಿದರೂ ಕೇಳದೆ ಆರೋಪಿತರು ಏಕಾಏಕಿ ಸುಮಾರು 09.30 ಗಂಟೆಗೆ ಸಮವಸ್ತ್ರದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೂ ಮತ್ತು ಅರಣ್ಯ ಸಿಬ್ಬಂದಿಯವರಿಗೂ ಕಲ್ಲು ತೂರಾಟ ಮಾಡಿರುತ್ತಾರೆ. ಕಲ್ಲು ತೂರಾಟದಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಪೊಲೀಸರಿಗೂ ಗಾಯಗಳಗಿರುತ್ತದೆ. ಬಳಿಕ ಆರೋಪಿಗಳು ಸ್ಥಳದಲ್ಲಿ ನಿಲ್ಲಿಸಿದ್ದ ಅರಣ್ಯ ಇಲಾಖಾ ವಾಹನ ಹಾಗೂ ಪೊಲೀಸು ಇಲಾಖಾ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿ ವಾಹನಗಳನ್ನು ಜಖಂ ಮಾಡಿರುತ್ತಾರೆ ಎಂದು ಉಪ ವಲಯ ಅರಣ್ಯ ಅಧಿಕಾರಿಯವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ದೂರಿನ ಅನ್ವಯ ಕಡಬ ಪೊಲೀಸ್ ಠಾಣೆಯಲ್ಲಿ cr no 18/2023.ಕಲಂ:143,144,147,148,341,353,332,307,427,504,506 ಜೊತೆಗೆ 149 ಐ.ಪಿ.ಸಿ ಮತ್ತು ಕಲಂ: 2(ಬಿ),Karnataka Prevention of Distruction&loss Of Property Act-1981 ರಂತೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ 7 ಜನ ಆರೋಪಿತರನ್ನು ದಸ್ತಗಿರಿ ಮಾಡಲಾಗಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 289 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 47 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 320 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 55 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 113 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ