ಕಾಡಿನಿಂದ ಆಹಾರವನ್ನರಿಸಿ ನಾಡಿಗೆ ಬಂದ ಜಿಂಕೆ ಅರಣ್ಯಾಧಿಕಾರಿಗಳುಮತ್ತು ನಾಗರೀಕರಿಂದ ಸಮಯ ಪ್ರಜ್ಞೆಯಿಂದ ಮತ್ತೆ ಕಾಡು ಸೇರಿಸುವಲ್ಲಿ ಯಶಸ್ವಿ ಕಾರ್ಯಾಚರಣೆ

ಧರ್ಮಸ್ಥಳ: ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಿಸಿಕೊಂಡು ಹೋಗಿರುವ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ.

ಸುಸ್ತಾಗಿದ್ದ ಜಿಂಕೆ ಧರ್ಮಸ್ಥಳ ಬಸ್ ನಿಲ್ದಾಣದ ಒಳಗೆ ಬಂದು ಆಶ್ರಯ ಪಡೆದಿದ್ದು, ಈ ವಿಚಾರ ತಿಳಿದ ಕೂಡಲೇ ಅರಣ್ಯ ಇಲಾಖೆಯ ಬೆಳ್ತಂಗಡಿ ಕಚೇರಿಗೆ ಮಾಹಿತಿ ತಿಳಿಸಿದ್ದು, ಅಧಿಕಾರಿಗಳು ಹಾಗೂ ಸ್ಥಳೀಯರ ಸಹಾಯದಿಂದ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

READ ALSO