ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿಯ ಚಿಂತನೆಯಂತೆ ಬೈಕೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ 300 ವಿವಿಧ ಜಾತಿಯ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಹಮ್ಮಿಕೊಳ್ಳಲಾಯಿತು.

ಕಾಡಿನಲ್ಲಿ ಹಣ್ಣಿನ ಗಿಡಗಳ ಸಂಖ್ಯೆ ಹೆಚ್ಚಾದರೆ ಪ್ರಾಣಿ ಹಾಗೂ ಪಕ್ಷಿಗಳಿಗೆ ವರ್ಷಪೂರ್ತಿ ನೈಸರ್ಗಿಕ ಆಹಾರ ದೊರೆಯುತ್ತದೆ. ಇದರಿಂದ ಕಾಡು ಬಿಟ್ಟು ಗ್ರಾಮಗಳಿಗೆ ಆಹಾರ ಅರಸಿ ಬರುವ ಪ್ರಮಾಣ ಕಡಿಮೆಯಾಗಲಿದ್ದು, ಮಾನವ–ಪ್ರಾಣಿ ಸಂಘರ್ಷವನ್ನು ತಗ್ಗಿಸುವಲ್ಲಿ ಈ ಯೋಜನೆ ಪರಿಣಾಮಕಾರಿ ಹೆಜ್ಜೆಯಾಗಲಿದೆ. ಪರಿಸರ ಸಂರಕ್ಷಣೆ, ಜೀವ ವೈವಿಧ್ಯದ ಉಳಿವು ಹಾಗೂ ವನ್ಯಜೀವಿಗಳ ರಕ್ಷಣೆಯ ದೃಷ್ಟಿಯಿಂದ ಈ ಅಭಿಯಾನ ಮಹತ್ವದ್ದಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಾಜೇಶ.ಎಂ ತಿಳಿಸಿದರು.

ಈ ಸಂದರ್ಭದಲ್ಲಿ ಬೈಕೆರೆ ಗ್ರಾಮದ ಪ್ರದೀಪ್ ಡಿಸೋಜ ಮಾತನಾಡಿ, “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡವು ಪರಿಸರ ಸಂರಕ್ಷಣೆ, ವಿಪತ್ತು ನಿರ್ವಹಣೆ ಹಾಗೂ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಗ್ರಾಮ ಹಾಗೂ ಪರಿಸರದ ಹಿತದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ತಂಡದ ಕಾರ್ಯ ನಿಜಕ್ಕೂ ಶ್ಲಾಘನೀಯ. ಮುಂದಿನ ದಿನಗಳಲ್ಲಿಯೂ ಇಂತಹ ಪರಿಸರ ಸ್ನೇಹಿ ಅಭಿಯಾನಗಳು ಇನ್ನಷ್ಟು ವಿಸ್ತಾರವಾಗಲಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಚಿರಂತ್, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಶಿವಣ್ಣ, ನಿಕಟ ಪೂರ್ವ ಮಾಸ್ಟರ್ ಮಧುವರನ್, ಸಕಲೇಶಪುರ ಘಟಕ ಪ್ರತಿನಿಧಿ ಹರೀಶ್, ಘಟಕ ಸಂಯೋಜಕರಾದ ದಿವ್ಯ ಹಾಗೂ ಸರೋಜ, ಸ್ವಯಂಸೇವಕರಾದ ವಸಂತ್ ಕುಮಾರ್, ಉಮೇಶ್, ಗುರುಪ್ರಕಾಶ್, ಷಣ್ಮುಖ, ರಾಮು, ಬಾಸ್ಕರ್, ರಮೇಶ್, ಮಂಜುನಾಥ್, ಆನಂದ್, ಲೀಲಾವತಿ ಮತ್ತು ಅನಿಲ್ ಸೇರಿದಂತೆ ಹಲವರು ಭಾಗವಹಿಸಿ ಗಿಡ ನೆಡುವ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಿದರು.

ಪರಿಸರ ಸಂರಕ್ಷಣೆ ಮತ್ತು ವನ್ಯಜೀವಿಗಳ ಉಳಿವಿಗೆ ಪೂರಕವಾದ ಈ ಕಾರ್ಯಕ್ರಮವು ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆಗೆ ಪಾತ್ರವಾಯಿತು.

Spread the love
  • Related Posts

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    ಧರ್ಮಸ್ಥಳ : ( ಆಗಸ್ಟ್ 14) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2 ,ಶಾಲೆಯಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಕೆ .ನಂದ ಇವರು ತುಳು…

    Spread the love

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗಣಪನ ಅಲಂಕಾರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 11 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 22 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 11 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 15 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 12 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 16 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ