ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

ಬೆಳ್ತಂಗಡಿ, ಜೂನ್ 24: ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣ ಹಾಗೂ ಚಾರಣ ಪ್ರಿಯರ ನೆಚ್ಚಿನ ಗಮ್ಯಸ್ಥಾನವಾದ ಗಡಾಯಿಕಲ್ಲು (ಜಮಲಾಬಾದ್ ಕೋಟೆ) ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದ್ದು, ಪ್ರವಾಸಿಗರು ಕೆಲವು ಪ್ರಮುಖ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಪರಿಸರದ ಮೇಲಿನ ಒತ್ತಡವನ್ನು ನಿಯಂತ್ರಿಸುವ ಉದ್ದೇಶದಿಂದ ದಿನಕ್ಕೆ ಕೇವಲ 500 ಪ್ರವಾಸಿಗರಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ಚಾರಣಕ್ಕೆ ತೆರಳಲು ಬಯಸುವವರು ಮುಂಚಿತವಾಗಿ ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್ kudremukhanationalpark.in ನಲ್ಲಿ ಆನ್‌ಲೈನ್ ಪ್ರೀ-ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಪ್ರವೇಶ ಸಮಯವನ್ನು ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಗದಿಪಡಿಸಲಾಗಿದೆ. ಮಧ್ಯಾಹ್ನ 1 ಗಂಟೆಯೊಳಗೆ 500 ಜನರ ಮಿತಿ ಪೂರ್ಣಗೊಂಡಲ್ಲಿ ತಕ್ಷಣವೇ ಪ್ರವೇಶ ದ್ವಾರವನ್ನು ಮುಚ್ಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಾರಣ ಆರಂಭವಾಗುವ ತಪಾಸಣಾ ಕೇಂದ್ರದಲ್ಲಿ ಪ್ರತಿಯೊಬ್ಬ ಪ್ರವಾಸಿಗರೂ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಯಾವುದೇ ಅಧಿಕೃತ ಗುರುತಿನ ಚೀಟಿಯನ್ನು ತೋರಿಸುವುದು ಕಡ್ಡಾಯವಾಗಿದೆ.

ಆನ್‌ಲೈನ್‌ನಲ್ಲಿ ಕೇವಲ ನೋಂದಣಿ ಮಾತ್ರ ಮಾಡಿಕೊಳ್ಳಬೇಕಾಗಿದ್ದು, ಪ್ರವೇಶ ಶುಲ್ಕವನ್ನು ಸ್ಥಳದಲ್ಲೇ ನಗದು ರೂಪದಲ್ಲಿ ಪಾವತಿಸಬೇಕಾಗುತ್ತದೆ. ಆನ್‌ಲೈನ್ ಪಾವತಿ ವ್ಯವಸ್ಥೆ ಲಭ್ಯವಿರುವುದಿಲ್ಲ.

ಈ ಕುರಿತು ಮಾಹಿತಿ ನೀಡಿರುವ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠ, ಪ್ರವಾಸಿಗರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರಿಸರ ಸಂರಕ್ಷಣೆಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 6 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 17 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 12 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 24 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 32 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 17 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ