“ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರ ತ್ವರಿತ ಕಾರ್ಯಾಚರಣೆಯಿಂದ ಆತನನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು.

ತಣ್ಣೀರುಪಂಥ ಗ್ರಾಮದ ಜನಾತ ಕಾಲೋನಿ ಪ್ರದೇಶದ ನಾಲ್ವರು ಪ್ರವಾಸಿಗರು ಬೆಳಿಗ್ಗೆ ಟಿಕೆಟ್ ಪಡೆದು ಗಡಾಯಿಕಲ್ಲಿಗೆ ತೆರಳಿದ್ದರು. ಗಡಾಯಿಕಲ್ಲಿನ ಮೆಟ್ಟಿಲುಗಳನ್ನು ಹತ್ತಿ ಮೇಲೇರಿದ ಬಳಿಕ ಮಹಮ್ಮದ್ ಶರೀಫ್ (30) ಅವರ ಕಾಲು ತಿರುಗಿ ಗಾಯಗೊಂಡ ಪರಿಣಾಮ ಅವರಿಗೆ ಕೆಳಗೆ ಇಳಿಯಲು ಸಾಧ್ಯವಾಗಲಿಲ್ಲ.

ಈ ಕುರಿತು 112 ಹೊಯ್ಸಳ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ತಕ್ಷಣವೇ ಬೆಳ್ತಂಗಡಿ ಅಗ್ನಿಶಾಮಕ ದಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ತಂಡವನ್ನು ಸಂಪರ್ಕಿಸಲಾಯಿತು. ಸ್ಥಳೀಯರ ಸಹಕಾರದೊಂದಿಗೆ ಸುಮಾರು 1500 ಮೆಟ್ಟಿಲುಗಳನ್ನು ಹತ್ತಿ ರಕ್ಷಣಾ ತಂಡ ಸ್ಥಳಕ್ಕೆ ತಲುಪಿತು.

ಸುಮಾರು ಮೂರು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಗಾಯಾಳುವನ್ನು ಸುಮಾರು 1.5 ಕಿಲೋಮೀಟರ್ ದೂರ ಹೊತ್ತು ತಂದು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಬಳಿಕ ಬಾಬಾ ಆಂಬುಲೆನ್ಸ್ ಮೂಲಕ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ರಕ್ಷಣಾ ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಅಗ್ನಿಶಾಮಕದಳದ ಫೈರ್ ಸ್ಟೇಷನ್ ಅಧಿಕಾರಿ ವೆಂಕಟೇಶ್ ಎಸ್‌.ಹೆಚ್, ಸಹಾಯಕ ಠಾಣಾಧಿಕಾರಿ ನೀಲಯ್ಯ ಗೌಡ, ಲೋಕೇಶ್ ನಾಯಕ್, ಶ್ರವನ್ ನಾಯಕ್,ವೆಂಕಣ್ಣ,ರಾಮಪ್ಪ,ಚಾಲಕ ರತನ್ ಕುಮಾರ್.ಎನ್, ಶ್ರೀ ಕ್ಷೇತ್ರ ಧರ್ಮಸ್ಥದ ಶೌರ್ಯ ವಿಪತ್ತು ತಂಡದ ಅವಿನಾಶ್ ಭೀಡೆ, ಸಚಿನ್ ಭೀಡೆ, ರಮೇಶ್ ಬೈರಕಟ್ಟ, ಸುಧೀರ್ ಉಜಿರೆ, ರವೀಂದ್ರ ಉಜಿರೆ, ಮಂಜುನಾಥ್ ನಡ, ಬೆಳ್ತಂಗಡಿ ವನ್ಯಜೀವಿ ವಿಭಾಗದ ಡಿ.ಆರ್.ಎಫ್.ಓ ರವೀಂದ್ರ ನಾಯ್ಕ್, ಬೀಟ್ ಫಾರೆಸ್ಟ್ ಹೇಮಂತ್, ಅರಣ್ಯ ವೀಕ್ಷಕ ವೀರಪ್ಪ, ಸುರೇಶ್,ಸ್ಥಳೀಯರಾದ ವಿನೋದ್ ಪಿಂಟೋ, ಸುಜೀತ್ ಶೆಟ್ಟಿ, ಕಿರಣ್ ಮಿರಾಂದ,ಕ್ಲೇವಿನ್ ಮಿರಾಂದದ,ರಿವೋನ್ ಮಿರಾಂದ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಸಮನ್ವಯ ಮತ್ತು ತ್ವರಿತ ಸ್ಪಂದನೆಯ ಮೂಲಕ ಜೀವ ರಕ್ಷಿಸಿದ ರಕ್ಷಣಾ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ