ದಿಡೀರ್ ಏರಿಕೆ ಕಂಡ ಅಡುಗೆ ಅನಿಲ ದರ! ಇಂದು ಮದ್ಯರಾತ್ರಿಯಿಂದಲೇ ಹೊಸದರ ಜಾರಿ

ನವದೆಹಲಿ: ದಿನಬಳಕೆಯ ಗ್ಯಾಸ್ ಸಿಲಿಂಡರ್ ದರ ಇಂದು ಮಧ್ಯರಾತ್ರಿಯಿಂದಲೇ ದಿಡೀರ್ ಏರಿಕೆಯಾಗಿದೆ.

ಲಾಕ್ಡೌನ್ ಪೂರ್ಣಗೊಳ್ಳುತ್ತಿದ್ದಂತೆ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರವನ್ನು ಹೆಚ್ಚಿಸುತ್ತಿದೆ.

ಈಗಾಗಲೇ ಲೀಟರ್ ಪೆಟ್ರೋಲ್ ದರ ದೇಶಾದ್ಯಂತ 90 ರೂಪಾಯಿ ಗಡಿ ದಾಟಿದ್ದು ಈಗ ಅಡುಗೆ ಅನಿಲದ ಬೆಲೆಯನ್ನು ಸಿಲಿಂಡರ್ ಗೆ 50 ರೂಪಾಯಿ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಈ ಹೊಸ ನಿಯಮ ಜಾರಿಗೆ ಬರಲಿದೆ.

ನಾಳೆಯಿಂದ ಪ್ರತಿ ಸಿಲಿಂಡರ್​ ಬೆಲೆ 50 ರೂಪಾಯಿ ಹೆಚ್ಚಾಗಲಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಸಿಲಿಂಡರ್​ ಬೆಲೆ 769 ರೂಪಾಯಿ ಆಗಲಿದೆ. ಕರ್ನಾಟಕದಲ್ಲಿ ಪ್ರತಿ ಸಿಲಿಂಡರ್​ ಬೆಲೆ 772 ರೂಪಾಯಿ ಆಗಲಿದೆ. ಈ ಮೊದಲು 722 ರೂಪಾಯಿ ಇತ್ತು. ರಾಜ್ಯದಿಂದ ರಾಜ್ಯಕ್ಕೆ ಈ ದರ ಭಿನ್ನವಾಗಿರಲಿದೆ.

2020ರ ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿತ್ತು. ಜೂನ್​, ಜುಲೈನಲ್ಲಿ ಮತ್ತೆ ಏರಿಕೆ ಕಂಡಿದ್ದ ದರ, ನಂತರ ನಾಲ್ಕು ತಿಂಗಳು ಯಾವುದೇ ಬದಲಾವಣೆ ಕಂಡಿರಲಿಲ್ಲ. 2021ರ ಜನವರಿ ತಿಂಗಳಲ್ಲಿ ಪ್ರತಿ ಸಿಲಿಂಡರ್​ ದರ 100 ರೂಪಾಯಿ ಏರಿಕೆ ಆಗಿತ್ತು.

ಗ್ಯಾಸ್ ಗೆ ಸಿಗುತಿದ್ದ ಸಬ್ಸಿಡಿಯನ್ನೂ ಕೇಂದ್ರ ಸರ್ಕಾರ ಕೆಲವು ತಿಂಗಳುಗಳಿಂದ ತಡೆಹಿಡಿದಿದೆ.

ಪೆಟ್ರೋಲ್​ ದರ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಹತ್ತು ದಿನಗಳ ಹಿಂದೆ ಇಪ್ಪತೈದು ರೂಪಾಯಿ ಏರಿಕೆ ಕಂಡಿದ್ದ ಅನಿಲ ಬೆಲೆ ಇಂದು ಮತ್ತೆ 50 ಏರಿಕೆ ಆಗಿದೆ.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ